ಮಂಗಳವಾರ, ಮೇ 17, 2022
29 °C

ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಅಶೋಕ್ ದಿಂಡಾ

ಪಿಟಿಐ Updated:

ಅಕ್ಷರ ಗಾತ್ರ : | |

Ashok Dinda

ಕೋಲ್ಕತ್ತ: ಬಂಗಾಳದ ವೇಗದ ಬೌಲರ್ ಅಶೋಕ್ ದಿಂಡಾ ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ಮಂಗಳವಾರ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ ಒಂದೂವರೆ ದಶಕದ ಅವರ ವೃತ್ತಿ ಜೀವನಕ್ಕೆ ತೆರೆ ಎಳೆದಂತಾಗಿದೆ.

36 ವರ್ಷ ವಯಸ್ಸಿನ ದಿಂಡಾ ಅವರು ಟೀಂ ಇಂಟಿಯಾ ಪರ 13 ಏಕದಿನ ಕ್ರಿಕೆಟ್, 9 ಟಿ20 ಪಂದ್ಯಗಳಲ್ಲಿ ಆಡಿದ್ದಾರೆ. 2019–20ನೇ ಸಾಲಿನಲ್ಲಿ ಕೇವಲ ಒಂದು ರಣಜಿ ಪಂದ್ಯವನ್ನು ಆಡಿದ್ದ ಅವರು ಶಿಸ್ತು ಕ್ರಮ ಎದುರಿಸಿ, ಬಳಿಕ ಗೋವಾಕ್ಕೆ ತೆರಳಿದ್ದರು.

ಓದಿ: 

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಮೂರು ಬಾರಿ ಗೋವಾ ತಂಡವನ್ನು ಪ್ರತಿನಿಧಿಸಿದ್ದಾರೆ.

‘ಇಂದು ನಾನು ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿಯಾಗುತ್ತಿದ್ದೇನೆ. ಬಿಸಿಸಿಐ ಮತ್ತು ಜಿಸಿಎಗೆ ಮೇಲ್ ಮೂಲಕ ಸಂದೇಶ ಕಳುಹಿಸಿದ್ದೇನೆ’ ಎಂದು ಈಡನ್‌ ಗಾರ್ಡನ್ಸ್‌ನಲ್ಲಿ ದಿಂಡಾ ಅವರು ಮಾಧ್ಯಮದವರಿಗೆ ತಿಳಿಸಿದ್ದಾರೆ.

2005–06ನೇ ಋತುವಿನಲ್ಲಿ ಮಹಾರಾಷ್ಟ್ರ ವಿರುದ್ಧ ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಮೊದಲ ಬಾರಿ ಆಡಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಬಿಸಿಸಿಐ ಈಗಿನ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ದಿಂಡಾ ಧನ್ಯವಾದ ಸಮರ್ಪಿಸಿದ್ದಾರೆ.

ಓದಿ: 

ದಿಂಡಾ ಅವರು ಐಪಿಎಲ್‌ನಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್, ಕೋಲ್ಕತ್ತಾ ನೈಟ್‌ರೈಡರ್ಸ್, ಪುಣೆ ವಾರಿಯರ್ಸ್, ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡಗಳಲ್ಲಿಯೂ ಆಡಿದ್ದರು.

ಐಪಿಎಲ್‌ನ 78 ಇನ್ನಿಂಗ್ಸ್‌ಗಳಲ್ಲಿ 68 ವಿಕೆಟ್‌ ಪಡೆದಿದ್ದಾರೆ. 18 ರನ್‌ ನೀಡಿ 4 ವಿಕೆಟ್ ಕಬಳಿಸಿರುವುದು ಐಪಿಎಲ್‌ನಲ್ಲಿ ಇವರ ಶ್ರೇಷ್ಠ ಸಾಧನೆಯಾಗಿದೆ.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು