ಬೆಂಗಳೂರು: ‘ಐಪಿಎಲ್ ಕ್ರಿಕೆಟ್ ಅಂತಿಮ ಪಂದ್ಯ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ನಾವು ಅದಕ್ಕೆ ಅನುಮತಿ ನೀಡಿದ್ದೆವು. ಆದರೆ, ಗುಜರಾತಿನವರು ತಮ್ಮ ಪ್ರಭಾವ ಬಳಸಿ ನಮ್ಮಿಂದ ಪಂದ್ಯ ಕಿತ್ತುಕೊಂಡಿದ್ದಾರೆ’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ಆರೋಪಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮುಂದೆ ಮತ್ತೆ ಈ ರೀತಿ ಕಿತ್ತುಕೊಳ್ಳದಂತೆ ಅಗತ್ಯ ಸಿದ್ಧತೆ ಮಾಡುತ್ತಿದ್ದೇವೆ. ಅದಕ್ಕೆ ಸ್ವಲ್ಪ ಸಮಯ ಬೇಕಾಗುತ್ತದೆ’ ಎಂದರು.

‘ನಮ್ಮ ಕ್ರೀಡಾಪ್ರೇಮಿಗಳಿಗೆ ಅನ್ಯಾಯ ಆಗಿರಬಹುದು. ನಮ್ಮ ರಾಜ್ಯದ ಹೆಸರಿನಲ್ಲಿ ಪ್ರತಿನಿಧಿಸುವ ತಂಡ ಉತ್ತಮವಾಗಿ ಆಡಿ ಗೆದ್ದಿದೆ. ನಮ್ಮೆಲ್ಲರಿಗೂ ಹೆಮ್ಮೆ ತಂದಿದೆ. ಕರ್ನಾಟಕ ರಾಜ್ಯದ ಜನರ ಪರವಾಗಿ ಆರ್ಸಿಬಿ ತಂಡವನ್ನು ಅಭಿನಂದಿಸುತ್ತೇನೆ’ ಎಂದೂ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-4-1317466461

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.