ಬೆಂಗಳೂರು: ಐಪಿಎಲ್ ಪಂದ್ಯಗಳ ಟಿಕೆಟ್ಗಳನ್ನು ಅಕ್ರಮವಾಗಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೂ ಕರ್ನಾಟಕ ಕ್ರಿಕೆಟ್ ಸಂಸ್ಥೆಗೂ (ಕೆಎಸ್ಸಿಎ) ಸಂಬಂಧವಿಲ್ಲ ಎಂದು ಸಂಸ್ಥೆಯ ವಕ್ತಾರ ವಿನಯ್ ಮೃತ್ಯುಂಜಯ ಹೇಳಿದ್ದಾರೆ.

‘ಪ್ರಕರಣದಲ್ಲಿ ಕೆಲವು ವ್ಯಕ್ತಿಗಳ ಬಂಧನ ಹಾಗೂ ಕಾರ್ಪೊರೇಟ್ ಸಂಸ್ಥೆಗಳ ಹೆಸರು ಕೇಳಿ ಬಂದಿರುವುದು ಸಂಸ್ಥೆ ಗಮನಕ್ಕೆ ಬಂದಿದೆ. ಸಾರ್ವಜನಿಕರಿಗೆ ನೇರವಾಗಿ ಟಿಕೆಟ್ಗಳನ್ನು ಮಾರಾಟ ಮಾಡುವ ಜವಾಬ್ದಾರಿ ನಮ್ಮದಲ್ಲ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಐಪಿಎಲ್ ಪಂದ್ಯಗಳ ಟಿಕೆಟ್ ಮಾರಾಟ ಆಯಾ ಫ್ರಾಂಚೈಸಿಗಳು ಮತ್ತು ಅವರು ನೇಮಿಸಿದ ಅಧಿಕೃತ ಟಿಕೆಟ್ ಪಾಲುದಾರರು ಮಾತ್ರ ನಿರ್ವಹಿಸುತ್ತಾರೆ. ಕೇವಲ ಸೀಮಿತ ಪ್ರಮಾಣದ ಟಿಕೆಟ್ಗಳನ್ನು ಮಾತ್ರವೇ ಕೆಎಸ್ಸಿಎ ಪಡೆಯುತ್ತದೆ. ಅವುಗಳನ್ನು ಕ್ರಿಕೆಟ್ ಕ್ಲಬ್, ಕಾಯಂ ಸದಸ್ಯರಿಗೆ ಮತ್ತು ಕೆಎಸ್ಸಿಎಗೆ ಸೇವೆ ಒದಗಿಸುವ ಕೆಲವು ಶಾಸನಬದ್ಧ ಸರ್ಕಾರಿ ಸಂಸ್ಥೆಗಳಿಗೆ ಮಾತ್ರ ಒದಗಿಸಲಾಗುತ್ತದೆ ಎಂದು ಹೇಳಿದ್ದಾರೆ.

ಅಕ್ರಮವಾಗಿ ಟಿಕೆಟ್ ಮಾರಾಟದ ಆರೋಪದಡಿ ತನಿಖೆಗೊಳಪಟ್ಟಿರುವ ಸಂಸ್ಥೆಗಳಿಗೂ ಕೆಎಸ್ಸಿಎಗೂ ಸಂಬಂಧವಿಲ್ಲ. ಈ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ರಾಜ್ಯ ಕ್ರಿಕೆಟ್ ಸಂಸ್ಥೆಯ ಸದಸ್ಯರಲ್ಲ. ತನಿಖಾ ಸಂಸ್ಥೆಗಳಿಗೆ ಸಹಕಾರ ನೀಡಲಿದ್ದು, ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಗುರುತಿಸಲು ಮತ್ತು ಇಂತಹ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿನಯ್ ಒತ್ತಾಯಿಸಿದ್ದಾರೆ.

ಐಪಿಎಲ್ ಪಂದ್ಯಗಳ ಟಿಕೆಟ್ ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದಡಿ ಚಿನ್ನಸ್ವಾಮಿ ಕ್ರೀಡಾಂಗಣದ ಲಕ್ಷ್ಮಿ ಹೋಟೆಲ್ನ ಚಂದ್ರಶೇಖರ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿ, ಟಿಕೆಟ್ ಜಪ್ತಿ ಮಾಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-4-303638525

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.