ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs AUS Final: ಪ್ರಧಾನಿ ಮೋದಿ ಸೇರಿದಂತೆ ಭಾರತ ತಂಡಕ್ಕೆ ಗಣ್ಯರ ಶುಭ ಹಾರೈಕೆ

Published 19 ನವೆಂಬರ್ 2023, 8:06 IST
Last Updated 19 ನವೆಂಬರ್ 2023, 8:06 IST
ಅಕ್ಷರ ಗಾತ್ರ

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಗೆದ್ದು ಬರಲಿ ಎಂದು ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದ್ದಾರೆ.

ಆಲ್‌ ದಿ ಬೆಸ್ಟ್‌ ಟೀಂ ಇಂಡಿಯಾ, ದೇಶದ 140 ಕೋಟಿ ಭಾರತೀಯರು ನಿಮ್ಮನ್ನು ಹುರಿದುಂಬಿಸುತ್ತಿದ್ದಾರೆ. ನೀವು ಈ ಫೈನಲ್‌ ಪಂದ್ಯದಲ್ಲಿ ಪ್ರಕಾಶಮಾನವಾಗಿ ಹೊಳೆಯಲಿ, ಉತ್ತಮ ಆಟವನ್ನು ಪ್ರದರ್ಶಿಸಲಿ ಹಾಗೂ ಕ್ರೀಡಾ ಮನೋಭಾವವನ್ನು ಎತ್ತಿಹಿಡಿಯಲಿ ಎಂದು ನಾನು ಹಾರೈಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಉತ್ತಮ ಆಟ ಆಡಲು ನಾನು ಭಾರತ ತಂಡಕ್ಕೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ.

1983 ಮತ್ತು 2011 ಭಾರತ ಕ್ರಿಕೆಟ್‌ ಇತಿಹಾಸದಲ್ಲಿ ಎರಡು ಪ್ರಮುಖ ಮೈಲಿಗಲ್ಲುಗಳಾಗಿದ್ದು, ಕ್ರಿಕೆಟ್‌ ಅಭಿಮಾನಿಗಳು ಎಂದಿಗೂ ಅದನ್ನು ಮರೆಯಲು ಸಾಧ್ಯವಿಲ್ಲ. ಅದೇ ರೀತಿಯಲ್ಲಿ ನೀವು ಇನ್ನೊಂದು ಐತಿಹಾಸಿಕ ಸಾಧನೆಗೆ ತಯಾರಿ ನಡೆಸುತ್ತಿದ್ದೀರಿ. ನಿಮಗೆ ಆಲ್‌ ದಿ ಬೆಸ್ಟ್‌ ಹಾಗೂ ವಿಶ್ವಕಪ್‌ ಟ್ರೋಫಿಯನ್ನು ಗೆದ್ದು ತನ್ನಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕ್ರಿಕೆಟ್‌ ಯುದ್ಧದ ಒಂದು ಶ್ರೇಷ್ಠ ಐತಿಹಾಸಿಕ ಸಂದರ್ಭಕ್ಕೆ ಭಾರತ ತಂಡಕ್ಕೆ ನಾನು ಶುಭಾಶಯಗಳನ್ನು ತಿಳಿಸುತ್ತೇನೆ. ಇಡೀ ರಾಷ್ಟ್ರವು ನಿಮ್ಮ ವಿಜಯೋತ್ಸಕ್ಕಾಗಿ ಕಾಯುತ್ತಿದೆ. ಆಟಗಾರರೇ, ವಿಶ್ವಕಪ್‌ ಟ್ರೋಫಿ ಗೆಲ್ಲುವ ಮೂಲಕ ನಮಗೆ ಹೆಮ್ಮೆ ತನ್ನಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಭ ಹಾರೈಸಿದ್ದಾರೆ.

ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ. ಬೌಲಿಂಗ್‌, ಬ್ಯಾಟಿಂಗ್‌, ಫೀಲ್ಡಿಂಗ್‌ ಎಲ್ಲಾ ವಿಭಾಗಗಳಲ್ಲೂ ನಮ್ಮದು ಒಂದು ಪರಿಪೂರ್ಣ ತಂಡವಾಗಿರುವುದರಿಂದ ಈ ಬಾರಿಯ ವಿಶ್ವಕಪ್‌ ಭಾರತದ ಮಡಿಲು ಸೇರುವುದು ನಿಶ್ಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಹಾರೈಸುವ ಮೂಲಕ ಭಾರತ ತಂಡದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT