ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾರ್ಡರ್‌–ಗಾವಸ್ಕರ್ ಟೆಸ್ಟ್ ಸರಣಿಯಲ್ಲಿ ಐದು ಪಂದ್ಯಗಳು

Published 25 ಮಾರ್ಚ್ 2024, 14:02 IST
Last Updated 25 ಮಾರ್ಚ್ 2024, 14:02 IST
ಅಕ್ಷರ ಗಾತ್ರ

ನವದೆಹಲಿ: ಮುಂಬರುವ ಬಾರ್ಡರ್‌–ಗಾವಸ್ಕರ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಐದು ಟೆಸ್ಟ್ ಪಂದ್ಯಗಳನ್ನು ಆಡಿಸಲಾಗುವುದು ಎಂದು ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಹೇಳಿದೆ.

ಈ ವರ್ಷಾಂತ್ಯದಲ್ಲಿ ನಡೆಯಲಿರುವ 204–25 ನೇ ಸಾಲಿನ ಸರಣಿಯ ವೇಳಾಪಟ್ಟಿಯನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು. 1991–92ರಿಂದ  ಇಲ್ಲಿಯವರೆಗೆ ನಡೆದ ಟೂರ್ನಿಯಲ್ಲಿ ಇದೇ ಮೊದಲ ಸಲ ಐದು ಪಂದ್ಯಗಳು ಸೇರ್ಪಡೆಯಾಘಿವೆ.  ಇದುವರೆಗೆ ನಾಲ್ಕು ಪಂದ್ಯಗಳ ಸರಣಿ ಮಾತ್ರ ನಡೆಯುತ್ತಿತ್ತು.

‘ಸರಣಿಯು ಆರಂಭವಾದ ನಂತರ ಮೊಟ್ಟಮೊದಲ ಬಾರಿಗೆ ಐದು ಟೆಸ್ಟ್‌ಗಳು ನಡೆಯುತ್ತಿವೆ. ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು’ ಎಂದು ಸಿಎ ಹಾಗೂ ಬಿಸಿಸಿಐ ಜಂಟಿಯಾಗಿ ಘೋಷಿಸಿವೆ.  

ಈ ಬಾರಿಯ ಸರಣಿಯು ನವೆಂಬರ್ ಕೊನೆಯ ವಾರದಲ್ಲಿ ಆರಂಭವಾಗುವ ಸಾಧ್ಯತೆ ಇದೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT