ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಿದರೆ ಮೆಲ್ಬರ್ನ್‌ನಲ್ಲಿಯೇ ಬಾಕ್ಸಿಂಗ್‌ ಡೇ ಟೆಸ್ಟ್’

Last Updated 8 ಆಗಸ್ಟ್ 2020, 11:19 IST
ಅಕ್ಷರ ಗಾತ್ರ

ಮೆಲ್ಬರ್ನ್‌: ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಿದರೆ ಬಾಕ್ಸಿಂಗ್‌ ಡೇ ಟೆಸ್ಟ್‌ ಪಂದ್ಯವನ್ನು ಮೆಲ್ಬರ್ನ್‌ ಕ್ರೀಡಾಂಗಣದಲ್ಲೇ ನಡೆಸಲಾಗುವುದು ಎಂದು ಕ್ರಿಕೆಟ್‌ ಆಸ್ಟ್ರೇಲಿಯಾದ (ಸಿಎ) ಹಂಗಾಮಿ ಸಿಇಒ ನಿಕ್‌ ಹಾಕ್ಲೆ ಶನಿವಾರ ಹೇಳಿದ್ದಾರೆ. ಆಸ್ಟ್ರೇಲಿಯಾ ತಂಡವು ಭಾರತದ ವಿರುದ್ಧ ಈ ಪಂದ್ಯವನ್ನು ಆಡಬೇಕಿದೆ.

ವಿಕ್ಟೋರಿಯಾ ಭಾಗದಲ್ಲಿ ಕೋವಿಡ್‌–19 ಸೋಂಕು ಪ್ರಕರಣಗಳು ನಿತ್ಯವೂ ಏರುಗತಿಯಲ್ಲಿ ಸಾಗುತ್ತಿರುವುದರಿಂದ ಡಿಸೆಂಬರ್‌ 26ರಂದು ನಡೆಯಲಿರುವ ಸಾಂಪ್ರದಾಯಿಕ ಟೆಸ್ಟ್‌ಅನ್ನು ಅಡಿಲೇಡ್‌ಗೆ ಸ್ಥಳಾಂತರಿಸುವ ಕುರಿತು ಚಿಂತನೆಗಳು ನಡೆದಿವೆ.

‘ಮೆಲ್ಬರ್ನ್‌ ಕ್ರಿಕೆಟ್‌ ಮೈದಾನದಲ್ಲಿ ಪ್ರೇಕ್ಷಕರಿಗೆ ಅನುಮತಿ ನೀಡಿದರೆ ಟೆಸ್ಟ್‌ ಪಂದ್ಯವನ್ನು ಆಯೋಜಿಸಲಾಗುವುದು‘ ಎಂದು ಹಾಕ್ಲೆ ಹೇಳಿದ್ದಾಗಿ ಕ್ರಿಕೆಟ್‌.ಕಾಮ್‌.ಎಯು ತಿಳಿಸಿದೆ.

‘ಕೋವಿಡ್‌ ತಡೆ ನಿಯಮಗಳನ್ನು ಪಾಲಿಸಲಾಗುವುದು. ಕೊರೊನಾ ಸಾಂಕ್ರಾಮಿಕದಿಂದ ಸಂಕಷ್ಟದಲ್ಲಿರುವ ಜನರ ಜೀವನ ಸಹಜಸ್ಥಿತಿಗೆ ಮರಳಬಹುದು. ಪ್ರೇಕ್ಷಕರು ಕ್ರೀಡಾಂಗಣಕ್ಕೆ ಮರಳಬಹುದು. ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯೊಂದಿಗೆ (ಬಿಸಿಸಿಐ) ನಾವು ರಚನಾತ್ಮಕ ಚರ್ಚೆ ನಡೆಸಿದ್ದೇವೆ. ಭಾರತ ತಂಡ ಇಲ್ಲಿಗೆ ಬರಲು ನಮ್ಮ ಸರ್ಕಾರ ಪ್ರಯಾಣ ನಿರ್ಬಂಧಗಳಲ್ಲಿ ಸಡಿಲಿಕೆ ಮಾಡುವ ವಿಶ್ವಾಸವಿದೆ‘ ಎಂದು ಹಾಕ್ಲೆ ನುಡಿದರು.

ವಿಶ್ವ ಕ್ರಿಕೆಟ್‌ನ ಪ್ರಮುಖ ಕ್ರೀಡಾಂಗಣಗಳಲ್ಲಿ ಮೆಲ್ಬರ್ನ್‌ ಕ್ರಿಕೆಟ್‌ ಮೈದಾನ ಕೂಡ ಒಂದು. ಮಾರ್ಚ್‌ನಲ್ಲಿ ಇಲ್ಲಿ ನಡೆದ ಮಹಿಳೆಯರ ಏಕದಿನ ವಿಶ್ವಕಪ್‌ ಫೈನಲ್‌ ಪಂದ್ಯಕ್ಕೆ 86,174 ಪ್ರೇಕ್ಷಕರು ಸಾಕ್ಷಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT