ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೋತಿ’ಎಂದ ಪ್ರೇಕ್ಷಕ: ಸಿಡ್ನಿಯಲ್ಲಿ ಬೂಮ್ರಾ, ಸಿರಾಜ್‌ಗೆ ಜನಾಂಗೀಯ ನಿಂದನೆ

Last Updated 9 ಜನವರಿ 2021, 17:38 IST
ಅಕ್ಷರ ಗಾತ್ರ

ಸಿಡ್ನಿ: ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಸಂದರ್ಭ ಟೀಮ್ ಇಂಡಿಯಾ ಆಟಗಾರರಾದ ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್ ಅವರಿಗೆ ಕುಡಿದ ಮತ್ತಿನಲ್ಲಿದ್ದ ಪ್ರೇಕ್ಷಕನೊಬ್ಬ ಜನಾಂಗೀಯ ನಿಂದನೆ ಮಾಡಿದ್ದಾನೆ. ಈ ಕುರಿತಂತೆ ಐಸಿಸಿ ಮ್ಯಾಚ್ ರೆಫರಿ ಡೇವಿಡ್ ಬೂನ್ ಅವರಿಗೆ ಬಿಸಿಸಿಐ ದೂರು ನೀಡಿದೆ.

ಬಿಸಿಸಿಐ ಮೂಲಗಳ ಪ್ರಕಾರ, ಸಿಡ್ನಿ ಕ್ರೀಡಾಂಗಣದ ಸ್ಟ್ಯಾಂಡ್‌ನಲ್ಲಿ ಕುಳಿತಿದ್ದ ಪ್ರೇಕ್ಷಕನೊಬ್ಬ ಮೊಹಮ್ಮದ್ ಸಿರಾಜ್ ಅವರನ್ನು ‘ಕೋತಿ’ ಎಂದು ನಿಂದಿಸಿದ್ದಾನೆ. ಈ ಘಟನೆ 2007–08ರಲ್ಲಿ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದ ಸಂದರ್ಭ ನಡೆದಿದ್ದ ಮಂಕಿಗೇಟ್ ಎಪಿಸೋಡ್ ಅನ್ನು ಮತ್ತೆ ನೆನಪಿಸಿದೆ.

"ಕುಡಿದ ಪ್ರೇಕ್ಷಕನೊಬ್ಬ ನಮ್ಮ ಆಟಗಾರರಾದ ಜಸ್‌ಪ್ರೀತ್ ಬೂಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ನಿಂದಿಸಿದ್ದಾನೆ ಎಂದು ಐಸಿಸಿ ಮ್ಯಾಚ್ ರೆಫರಿ ಡೇವಿಡ್ ಬೂನ್ ಅವರಿಗೆ ಬಿಸಿಸಿಐ ಅಧಿಕೃತವಾಗಿ ದೂರು ನೀಡಿದೆ," ಎಂದು ಮಂಡಳಿಯ ಮೂಲಗಳು ಪಿಟಿಐಗೆ ತಿಳಿಸಿವೆ.

ಈ ಹಿಂದೊಮ್ಮೆ, ಸಿಡ್ನಿ ಟೆಸ್ಟ್ ಸಮಯದಲ್ಲಿ ಮಂಕಿಗೇಟ್ ಎಪಿಸೋಡ್ ನಡೆದಿತ್ತು. ಹರ್ಭಜನ್ ಸಿಂಗ್ ನನ್ನನ್ನು ಕೋತಿ ಎಂದು ಅನೇಕ ಬಾರಿ ಕರೆದಿರುವುದಾಗಿ ಆಂಡ್ರ್ಯೂ ಸೈಮಂಡ್ಸ್ ಹೇಳಿದ್ದರು. ಆದರೆ, ಈ ಘಟನೆಯ ಬಗ್ಗೆ ವಿಚಾರಣೆನಡೆೆದ ಬಳಿಕ ಭಾರತೀಯ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ಅವರನ್ನು ಆರೋಪಮುಕ್ತಗೊಳಿಸಲಾಗಿತ್ತು.

ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್ ಅವರಿಗೆಪ್ರೇಕ್ಷಕನಿಂದಜನಾಂಗೀಯ ನಿಂದನೆಘಟನೆೆ ಕುರಿತಂತೆ, ದಿನದ ಆಟದ ಕೊನೆಯಲ್ಲಿ ನಾಯಕ ಅಜಿಂಕ್ಯ ರಹಾನೆ ಮತ್ತು ಟೀಮ್ ಇಂಡಿಯಾದ ಹಿರಿಯ ಆಟಗಾರರು, ಅಂಪೈರ್‌ಗಳು ಮತ್ತು ಭದ್ರತಾ ಅಧಿಕಾರಿಗಳ ಜೊತೆ ಸುದೀರ್ಘ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಭಾರತದ ಈ ಇಬ್ಬರುಆಟಗಾರರು ಫೀಲ್ಡಿಂಗ್ ಮಾಡುತ್ತಿದ್ದ ಸಂದರ್ಭ ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ವ್ಯಕ್ತಿ ನಿಂದನೆ ಮಾಡಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT