ಬೂಮ್ರಾ ಈಗ ಭಾರತದ ಅತ್ಯಂತ ಯಶಸ್ವಿ ಟಿ20 ಅಂತರರಾಷ್ಟ್ರೀಯ ಬೌಲರ್!

ದುಬೈ: ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್ ಮಾದರಿಯಲ್ಲಿ ಭಾರತದ ಅತ್ಯಂತ ಯಶಸ್ವಿ ಬೌಲರ್ ಎಂಬ ಹಿರಿಮೆಗೆ ಬಲಗೈ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಭಾಜನರಾಗಿದ್ದಾರೆ.
ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಶುಕ್ರವಾರ ಸ್ಕಾಟ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಬೂಮ್ರಾ ಈ ವಿಶಿಷ್ಟ ದಾಖಲೆ ಬರೆದರು.
ಇದನ್ನೂ ಓದಿ: 'ಬ್ಯಾಗ್ ಪ್ಯಾಕ್ ಮಾಡಿ ಮನೆಗೆ ಹೋಗುತ್ತೇವೆ'; ಜಡೇಜ ಹೀಗೆ ಹೇಳಿದ್ದೇಕೆ?
ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಕಬಳಿಸಿದ ಭಾರತೀಯ ಬೌಲರ್‌ಗಳ ಪೈಕಿ, ಯಜುವೇಂದ್ರ ಚಾಹಲ್ ಹಿಂದಿಕ್ಕಿರುವ ಬೂಮ್ರಾ ಅಗ್ರಸ್ಥಾನಕ್ಕೇರಿದ್ದಾರೆ.
ಸ್ಕಾಟ್ಲೆಂಡ್ ವಿರುದ್ಧ ಎರಡು ವಿಕೆಟ್ ಕಬಳಿಸಿರುವ ಬೂಮ್ರಾ, ಇದುವರೆಗೆ 54 ಪಂದ್ಯಗಳಲ್ಲಿ 64 ವಿಕೆಟ್‌ಗಳನ್ನು ಪಡೆದಿದ್ದಾರೆ. ಎರಡನೇ ಸ್ಥಾನದಲ್ಲಿರುವ ಚಾಹಲ್ 49 ಪಂದ್ಯಗಳಲ್ಲಿ 63 ವಿಕೆಟ್ ಗಳಿಸಿದ್ದಾರೆ.
ಪ್ರಸಕ್ತ ಸಾಗುತ್ತಿರುವ ಟ್ವೆಂಟಿ-20 ವಿಶ್ವಕಪ್‌ಗಾಗಿ ಭಾರತ ತಂಡದಲ್ಲಿ ಚಾಹಲ್ ಸ್ಥಾನ ಪಡೆದಿಲ್ಲ ಎಂಬುದು ಇಲ್ಲಿ ಗಮನಾರ್ಹವೆನಿಸುತ್ತದೆ.
ಬೂಮ್ರಾ 2016ರಲ್ಲಿ ಅಡಿಲೇಡ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಪಾದರ್ಪಣೆ ಮಾಡಿದ್ದರು.
ಅಂದ ಹಾಗೆ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್ ಮಾದರಿಯಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ದಾಖಲೆಯನ್ನು ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಹೊಂದಿದ್ದಾರೆ. ಇದೇ ವಿಶ್ವಕಪ್‌ನಲ್ಲಿ ಶ್ರೀಲಂಕಾದ ಮಾಜಿ ವೇಗದ ಬೌಲರ್ ಲಸಿತ್ ಮಾಲಿಂಗ (107) ದಾಖಲೆಯನ್ನು ಮುರಿದಿರುವ ಶಕೀಬ್, ಒಟ್ಟು 117 ವಿಕೆಟ್‌ಗಳನ್ನು ಹೊಂದಿದ್ದಾರೆ.
ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿ ಇಂತಿದೆ:
1.ಜಸ್‌ಪ್ರೀತ್ ಬೂಮ್ರಾ (64)
2.ಯಜುವೇಂದ್ರ ಚಾಹಲ್ (63)
3. ಆರ್. ಅಶ್ವಿನ್ (55)
4. ಭುವನೇಶ್ವರ್ ಕುಮಾರ್ (50)
5. ರವೀಂದ್ರ ಜಡೇಜ (43)
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.