ಕೇಪ್‌ಟೌನ್: ಟೀಮ್ ಇಂಡಿಯಾದ ಯಾರ್ಕರ್ ಪರಿಣತ ಜಸ್‌ಪ್ರೀತ್ ಬೂಮ್ರಾ ಅವರು ನ್ಯೂಲ್ಯಾಂಡ್ಸ್‌ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ವೇಗಿ ಮಾರ್ಕೊ ಜ್ಯಾನ್ಸನ್ ಅವರನ್ನು ಬೌಲ್ಡ್ ಮಾಡುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.

ಬುಧವಾರ ಎರಡನೇ ದಿನದಾಟದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಜಸ್‌ಪ್ರೀತ್ ಬೂಮ್ರಾ ಹಾಗೂ ಮಾರ್ಕೊ ಜ್ಯಾನ್ಸನ್ ನಡುವೆ ಮಾತಿನ ಚಕಮಕಿ ನಡೆದಿತ್ತು.

ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಬೂಮ್ರಾ, ಜ್ಯಾನ್ಸನ್ ಎಸೆದ ಬೌನ್ಸರ್‌ಗಳನ್ನು ಎದುರಿಸಲು ಪರದಾಡಿದ್ದರು. ಆಗ ಜ್ಯಾನ್ಸನ್ ಬೂಮ್ರಾರನ್ನು ಗುರಾಯಿಸಿ ನಿಂದಿಸಿದ್ದರು. ಇದು ಇಬ್ಬರ ನಡುವೆ ಮಾತಿನ ಚಕಮಕಿಗೆ ಕಾರಣವಾಗಿತ್ತು.

ದಕ್ಷಿಣ ಆಫ್ರಿಕಾದ ಎದುರಿನ ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಭಾರತ ತಂಡವು 13 ರನ್‌ಗಳ ಅಲ್ಪಮುನ್ನಡೆ ಗಳಿಸಿತು. ಮಂಗಳವಾರ ಆರಂಭವಾದ ಪಂದ್ಯದಲ್ಲಿ ಬ್ಯಾಟರ್‌ಗಳ ವೈಫಲ್ಯದಿಂದಾಗಿ ಭಾರತ ತಂಡವು 223 ರನ್‌ಗಳಿಗೆ ಆಲೌಟ್ ಆಗಿತ್ತು. ಆದರೆ, ಬೂಮ್ರಾ (42ಕ್ಕೆ5) ಬಿರುಗಾಳಿಯ ಮುಂದೆ ಆತಿಥೇಯ ತಂಡವು 76.3 ಓವರ್‌ಗಳಲ್ಲಿ 210 ರನ್ ಗಳಿಸುವಲ್ಲಿ ಮಾತ್ರ ಯಶಸ್ವಿಯಾಯಿತು.

ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಜ್ಯಾನ್ಸನ್ ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಬೂಮ್ರಾ ಸೇಡು ತೀರಿಸಿಕೊಂಡರು. ಈ ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ದಿನದಾಟದ ಅಂತ್ಯಕ್ಕೆ 17 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 57 ರನ್ ಗಳಿಸಿದೆ. ಚೇತೇಶ್ವರ್ ಪೂಜಾರ ಔಟಾಗದೆ 9, ವಿರಾಟ್ ಕೊಹ್ಲಿ ಔಟಾಗದೆ 14 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.