ದುಬೈ: ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮೊದಲ ಪಂದ್ಯಕ್ಕೆ ಇಂಗ್ಲೆಂಡ್‌ನ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ ಅಲಭ್ಯರಾಗಲಿದ್ದಾರೆ. ಕುಟುಂಬದೊಂದಿಗೆ ಇಲ್ಲಿಗೆ ಬಂದಿರುವ ಅವರು ಆರು ದಿನಗಳ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಬೇಕಾಗಿರುವುದರಿಂದ ಕಣಕ್ಕೆ ಇಳಿಯಲಾರರು.

ರಾಜಸ್ಥಾನ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ಎದುರು ಮಂಗಳವಾರ ಮೊದಲ ಪಂದ್ಯ ಆಡಲಿದೆ.

‘ಕುಟುಂಬದ ಜೊತೆ ಇಲ್ಲಿಗೆ ಬಂದಿದ್ದೇನೆ. ಆದ್ದರಿಂದ ಕ್ವಾರಂಟೈನ್ ಅವಧಿಯನ್ನು ಕಡ್ಡಾಯವಾಗಿ ಪೂರೈಸಬೇಕಾಗಿದೆ. ಹೀಗಾಗಿ ಮೊದಲ ಪಂದ್ಯದಲ್ಲಿ ಆಡುವುದು ಸಂದೇಹ. ಕುಟುಂಬದ ಜೊತೆ ಬರಲು ಅವಕಾಶ ನೀಡಿದ ರಾಯಲ್ಸ್ ಆಡಳಿತಕ್ಕೆ ನಾನು ಅಭಾರಿಯಾಗಿದ್ದೇನೆ’ ಎಂಬ ಅವರ ಹೇಳಿಕೆಯನ್ನು ತಂಡದ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಾಕಲಾಗಿದೆ.

ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಮುಗಿದ ನಂತರ ಎರಡೂ ದೇಶಗಳ 21 ಆಟಗಾರರು ಒಂದು ಕೆಲವು ದಿನಗಳಹಿಂದೆ ಇಲ್ಲಿಗೆ ಬಂದಿದ್ದಾರೆ. ಬಿಸಿಸಿಐ ಅವರ ಕ್ವಾರಂಟೈನ್ ಅವಧಿಯನ್ನು ಆರು ದಿನಗಳಿಂದ 36 ತಾಸುಗಳಿಗೆ ಇಳಿಸಿದೆ. ಎಲ್ಲರೂ ವಿಶೇಷ ವಿಮಾನದಲ್ಲಿ ಬಂದಿದ್ದು ಜೀವಸುರಕ್ಷಾ ವಲಯದಲ್ಲಿದ್ದಾರೆ.

ಆದರೆ ಬಟ್ಲರ್ ಪ್ರತ್ಯೇಕ ವಿಮಾನದಲ್ಲಿ ಬಂದಿದ್ದಾರೆ. ಆದ್ದರಿಂದ ಆರು ದಿನ ಕ್ವಾರಂಟೈನ್‌ನಲ್ಲಿರಬೇಕಾಗಿದೆ. ಇಂಗ್ಲೆಂಡ್‌ನ ಜೊಫ್ರಾ ಆರ್ಚರ್ ಮತ್ತು ಬೆನ್ ಸ್ಟೋಕ್ಸ್ ಕೂಡರಾಯಲ್ಸ್ ತಂಡದಲ್ಲಿ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.