ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಲ್‌ನಲ್ಲಿ ಆಡಲು ಆಸ್ಟ್ರೇಲಿಯಾ ಆಟಗಾರರಿಗೆ ಅನುಮತಿ

Last Updated 15 ಆಗಸ್ಟ್ 2021, 13:16 IST
ಅಕ್ಷರ ಗಾತ್ರ

ಮೆಲ್ಬರ್ನ್‌: ಇಂಡಿಯನ್‌ ಪ್ರೀಮಿಯರ್ ಲೀಗ್ (ಐಪಿಎಲ್‌) ಕ್ರಿಕೆಟ್‌ ಟೂರ್ನಿಯಲ್ಲಿ ಆಡಲು ಆಸ್ಟ್ರೇಲಿಯಾದ ಪ್ರಮುಖ ಆಟಗಾರರಿಗೆ ಅಲ್ಲಿಯ ಕ್ರಿಕೆಟ್ ಮಂಡಳಿ ಒಪ್ಪಿಗೆ ನೀಡಿದೆ.

ಐಪಿಎಲ್‌ಗೆ ಮರಳಲು ಆಟಗಾರರಿಗೆ ಕ್ರಿಕೆಟ್‌ ಆಸ್ಟ್ರೇಲಿಯಾ (ಸಿಎ) ನಿರಾಕ್ಷೇಪಣ ಪತ್ರಗಳನ್ನು ನೀಡಿದೆ. ಆದರೆ ಟಿ–20 ವಿಶ್ವಕಪ್ ಅಭ್ಯಾಸಕ್ಕಾಗಿ ಅಫ್ಘಾನಿಸ್ತಾನ ಮತ್ತು ವೆಸ್ಟ್ ಇಂಡೀಸ್‌ ತಂಡಗಳೊಂದಿಗೆ ಆಡಲು ಉದ್ದೇಶಿಸಿದ್ದ ಸರಣಿಗಳನ್ನು ಆಯೋಜಿಸುವುದೋ ಬೇಡವೊ ಎಂಬುದನ್ನು ಮರು ನಿರ್ಧರಿಸಬೇಕಿದೆ ಎಂದು ಕ್ರಿಕೆಟ್‌.ಎಯು.ಕಾಮ್ ವರದಿ ಮಾಡಿದೆ.

ಪ್ರಸಕ್ತ ಋತುವಿನ ಐಪಿಎಲ್ ಟೂರ್ನಿಯನ್ನು ಹೋದ ಮೇ ತಿಂಗಳಲ್ಲಿ ಭಾರತದಲ್ಲಿಯೇ ಆಯೋಜಿಸಲಾಗಿತ್ತು. ಆದರೆ, ಬಯೋಬಬಲ್‌ನಲ್ಲಿ ಕೋವಿಡ್‌ ಪ್ರಕರಣಗಳು ವರದಿಯಾದಾಗ ಟೂರ್ನಿಯನ್ನು ಮುಂದೂಡಲಾಗಿತ್ತು.

ಇದೀಗ ಉಳಿದರ್ಧ ಭಾಗದ ಟೂರ್ನಿಯನ್ನು ಯುನೈಟೆಡ್ ಅರಬ್‌ ಎಮಿರೇಟ್ಸ್‌ನಲ್ಲಿ ಸೆಪ್ಟೆಂಬರ್ 19ರಿಂದ ಆಯೋಜಿಸಲಾಗುತ್ತಿದೆ.

ಟಿ20 ವಿಶ್ವಕಪ್‌ಗೂ ಮೊದಲು ಆಸ್ಟ್ರೇಲಿಯಾದೊಂದಿಗೆ ಮೂರು ಏಕದಿನ ಪಂದ್ಯಗಳ ಸರಣಿಯನ್ನು ಅಫ್ಗಾನಿಸ್ತಾನ ಆಡಬೇಕಿತ್ತು. ಭಾರತದಲ್ಲಿ ಆಯೋಜಿಸಲು ಉದ್ದೇಶಿಸಿದ್ದ ಈ ಸರಣಿಯನ್ನು ಮುಂದೂಡಿರುವುದಾಗಿ ಅಫ್ಗಾನಿಸ್ತಾನ ಕ್ರಿಕೆಟ್ ಮಂಡಳಿ ಹೇಳಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಎ ತನ್ನ ಆಟಗಾರರಿಗೆ ನಿರಾಕ್ಷೇಪಣಾ ಪತ್ರ ನೀಡಿದೆ.

ಐಪಿಎಲ್‌ನ ಮೊದಲಾರ್ಧದಲ್ಲಿ ಆಡಿದ್ದ ಆಸ್ಟ್ರೇಲಿಯಾದ ಡೇವಿಡ್‌ ವಾರ್ನರ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌, ಸ್ಟೀವ್ ಸ್ಮಿತ್‌, ಮಾರ್ಕಸ್ ಸ್ಟೋಯಿನಿಸ್‌, ಜಾಯ್ ರಿಚರ್ಡ್ಸನ್‌, ಕೇನ್‌ ರಿಚರ್ಡ್ಸನ್‌ ಮತ್ತು ಡೇನಿಯಲ್ ಸ್ಯಾಮ್ಸ್ ಈ ಬಾರಿಯೂ ಕಣಕ್ಕಿಳಿಯುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT