ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಟ್ರೇಲಿಯಾ ಕ್ರಿಕೆಟ್‌ ಸಂಸ್ಕೃತಿ ಮರುವ್ಯಾಖ್ಯಾನ

Last Updated 25 ಅಕ್ಟೋಬರ್ 2018, 17:20 IST
ಅಕ್ಷರ ಗಾತ್ರ

ಮೆಲ್ಬರ್ನ್‌: ಆಸ್ಟ್ರೇಲಿಯಾ ಕ್ರಿಕೆಟ್‌ ಸಂಸ್ಕೃತಿಯ ಮರು ವ್ಯಾಖ್ಯಾನಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ನಿರ್ಧರಿಸಿದ್ದು ಈ ಕುರಿತ ಮಾಹಿತಿ ಮುಂದಿನ ಸೋಮವಾರ ಬಿಡುಗಡೆ ಆಗಲಿದೆ.

ಕ್ರಿಕೆಟ್ ಆಸ್ಟ್ರೇಲಿಯಾದ ಅಧ್ಯಕ್ಷರಾಗಿ ಗುರುವಾರ ಮರು ಆಯ್ಕೆಯಾದ ಡೇವಿಡ್ ಪೀವರ್‌ ಈ ವಿಷಯವನ್ನು ತಿಳಿಸಿದ್ದು ಸಹ ಸಂಸ್ಥೆಗಳ ಜೊತೆ ಮಾತುಕತೆ ನಡೆಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಸ್ಟೀವ್ ಸ್ಮಿತ್‌, ಡೇವಿಡ್ ವಾರ್ನರ್ ಮತ್ತು ಕ್ಯಾಮರಾನ್‌ ಬ್ಯಾಂಕ್ರಾಫ್ಟ್ ಸಿಲುಕಿ ಬಿದ್ದ ನಂತರ ಸಿಎ, ಕ್ರಿಕೆಟಿಗರ ಶಿಸ್ತಿನ ಬಗ್ಗೆ ಗಂಭೀರ ಚಿಂತನೆ ನಡೆಸಿದೆ. ಪ್ರಕರಣದ ನಂತರ ತಂಡದ ಕೋಚ್‌ ಡರೆನ್‌ ಲೆಹ್ಮನ್‌ ರಾಜೀನಾಮೆ ನೀಡಿದ್ದರು. ಸಿಎ ಮುಖ್ಯ ಕಾರ್ಯನಿರ್ವಾಹಕ ಜೇಮ್ಸ್ ಸುದರ್ಲೆಂಡ್‌ ಸ್ಥಾನ ತೊರೆಯಲು ನಿರ್ಧರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT