ಭಾನುವಾರ, ಜುಲೈ 25, 2021
25 °C

ಯಜುವೇಂದ್ರ ಚಾಹಲ್ ಜಾತಿ ಬಗ್ಗೆ ಹೇಳಿಕೆ: ಯುವರಾಜ್ ಸಿಂಗ್ ವಿರುದ್ಧ ದೂರು ದಾಖಲು

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಸ್ಪಿನ್ನರ್‌ ಯಜುವೇಂದ್ರ ಚಾಹಲ್‌ ಅವರ ಜಾತಿಯ ಬಗ್ಗೆ ಹೇಳಿಕೆ ನೀಡಿದ್ದ ಮಾಜಿ ಆಲ್ರೌಂಡರ್‌ ಯುವರಾಜ್‌ ಸಿಂಗ್‌ ಹರಿಯಾಣದ ಹಿಸ್ಸಾರ್‌ ಜಿಲ್ಲೆಯ ಹನ್ಸಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಯುವರಾಜ್‌ ಹೇಳಿಕೆ ಕುರಿತು ದಲಿತ ಹಕ್ಕುಗಳ ಕಾರ್ಯಕರ್ತ ಮತ್ತು ವಕೀಲ ರಜತ್‌ ಕಲ್ಸಾನ್‌ ಲಿಖಿತ ದೂರು ನೀಡಿದ್ದು, ಎಫ್‌ಐಆರ್‌ ದಾಲಿಸುವಂತೆ ಒತ್ತಾಯಿಸಿದ್ದಾರೆ.

ಆರಂಭಿಕ ಬ್ಯಾಟ್ಸ್‌ಮನ್‌ ರೋಹಿತ್‌ ಶರ್ಮಾ ಅವರೊಂದಿಗೆ ಇತ್ತೀಚೆಗೆ ಇನ್ಸ್‌ಸ್ಟಾಗ್ರಾಂನಲ್ಲಿ ಚರ್ಚೆ ನಡೆಸಿದ ವೇಳೆ, ಚಾಹಲ್‌ ಹೆಸರು ಪ್ರಸ್ತಾಪಿಸಿ ಜಾತಿಯ ಬಗ್ಗೆ ಮಾತನಾಡಿದ್ದಾರೆ ಎಂದು ಯುವಿ ವಿರುದ್ಧ ಆರೋಪಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು