ನವದೆಹಲಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಸಿಇಒ ರಾಹುಲ್ ಜೊಹ್ರಿ ಅವರ ರಾಜೀನಾಮೆಯನ್ನು ಗುರುವಾರ ಅಂಗೀಕರಿಸಿದೆ.

ಜೊಹ್ರಿ ಅವರು ಹೋದ ವರ್ಷದ ಡಿಸೆಂಬರ್ 27ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು.

‘ಈ ವರ್ಷದ ಏಪ್ರಿಲ್ 30ರವರೆಗೂ ಹುದ್ದೆಯಲ್ಲಿ ಮುಂದುವರಿಯುವಂತೆ ಜೊಹ್ರಿ ಅವರಿಗೆ ಸೂಚಿಸಲಾಗಿತ್ತು. ಈಗ ಅವರೊಂದಿಗಿನ ಸಂಬಂಧ ಕಡಿದುಕೊಳ್ಳಲು ಮಂಡಳಿ ನಿರ್ಧರಿಸಿದೆ. ಹೀಗಾಗಿ ಅವರ ರಾಜೀನಾಮೆ ಅಂಗೀಕರಿಸಲಾಗಿದೆ’ ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2016ರಲ್ಲಿ ಜೊಹ್ರಿ ಅವರನ್ನು ಬಿಸಿಸಿಐನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿತ್ತು. ಆಗ ಶಶಾಂಕ್ ಮನೋಹರ್ ಹಾಗೂ ಅನುರಾಗ್ ಠಾಕೂರ್ ಅವರು ಆಡಳಿತದಲ್ಲಿದ್ದರು. ನಂತರ ಸುಪ್ರೀಂಕೋರ್ಟ್ ನೇಮಿಸಿದ್ದ ಕ್ರಿಕೆಟ್ ಆಡಳಿತ ಸಮಿತಿಯೊಂದಿಗೂ (ಸಿಒಎ) ಜೊಹ್ರಿ ಕಾರ್ಯನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.