ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಿಟ್‌ ಆದ ರೋಹಿತ್‌‌ಗೆ ಉತ್ತಮ ಪ್ರದರ್ಶನ ನೀಡುವ ಸವಾಲು: ಅಜಿತ್‌ ಅಗರ್ಕರ್‌

Last Updated 4 ಫೆಬ್ರುವರಿ 2022, 9:54 IST
ಅಕ್ಷರ ಗಾತ್ರ

ಮುಂಬೈ: ‘ಭಾರತ ಏಕದಿನ ಕ್ರಿಕೆಟ್‌ ತಂಡದ ನಾಯಕ ರೋಹಿತ್ ಶರ್ಮಾ ಅವರಿಗೆ ಎಲ್ಲ ಮೂರು ಮಾದರಿಗಳಲ್ಲಿ ಉತ್ತಮ ಪ್ರದರ್ಶನ ತೋರುವುದು ಮತ್ತು ಫಿಟ್ನೆಸ್‌ ಕಾಪಾಡಿಕೊಳ್ಳುವುದು ಸವಾಲಾಗಿದೆ’ ಎಂದು ಭಾರತದ ಮಾಜಿ ವೇಗದ ಬೌಲರ್‌ ಅಜಿತ್ ಅಗರ್ಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಂ.ಎಸ್‌.ಧೋನಿ, ವಿರಾಟ್‌ ಕೊಹ್ಲಿ ಅವರಂತೆ ರೋಹಿತ್‌ ಶರ್ಮಾ ಕೂಡ ನಾಯಕರಾಗಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಫೆ.6ರಿಂದ ಅಹಮದಾಬಾದ್‌ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದ್ದು, ಈಗಾಗಲೇ ಆಟಗಾರರು ಅಭ್ಯಾಸದಲ್ಲಿ ತೊಡಗಿದ್ದಾರೆ.

2020ರಿಂದ ರೋಹಿತ್ ಶರ್ಮಾ ಪದೇ ಪದೇ ಗಾಯದ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. 2020ರ ಫೆಬ್ರುವರಿಯಲ್ಲಿ ನಡೆದ ನ್ಯೂಜಿಲೆಂಡ್‌ ವಿರುದ್ಧದ ಏಕದಿನ, ಟೆಸ್ಟ್‌ ಸರಣಿಯಿಂದ ಹೊರಗುಳಿದಿದ್ದರು.

ಯುಎಇಯಲ್ಲಿ ನಡೆದ ಐಪಿಎಲ್‌ ಟೂರ್ನಿಯ ವೇಳೆಯೂ ರೋಹಿತ್‌ ಗಾಯದ ಸಮಸ್ಯೆಗೆ ಒಳಗಾಗಿದ್ದರು. ಬಳಿಕ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಎರಡು ಟೆಸ್ಟ್‌ ಪಂದ್ಯಗಳಲ್ಲೂ ಕಣಕ್ಕಿಳಿದಿರಲಿಲ್ಲ.

2021ರ ಡಿಸೆಂಬರ್‌ನಲ್ಲಿ ರೋಹಿತ್‌ ಶರ್ಮಾ ಅವರನ್ನು ಏಕದಿನ ಕ್ರಿಕೆಟ್‌ ತಂಡದ ನಾಯಕರನ್ನಾಗಿ ಬಿಸಿಸಿಐ ಆಯ್ಕೆ ಮಾಡಿದೆ.

ಸದ್ಯ ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡಿರುವ ಶರ್ಮಾ, ಫೆ.6ರಂದು ವೆಸ್ಟ್‌ ಇಂಡೀಸ್ ವಿರುದ್ಧ ನಡೆಯಲಿರುವ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

ಫೆ.6ರಿಂದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಬಳಿಕ ಕೋಲ್ಕತ್ತದ ಈಡನ್ ಗಾರ್ಡನ್ಸ್‌ನಲ್ಲಿ ಮೂರು ಪಂದ್ಯಗಳ ಟಿ–20 ಸರಣಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT