ಲಾಹೋರ್: ನ್ಯೂಜಿಲೆಂಡ್ನ ಯುವ ಪ್ರತಿಭಾವಂತ ಎಡಗೈ ಆರಂಭಿಕ ಬ್ಯಾಟರ್ ರಚಿನ್ ರವೀಂದ್ರ, ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಐದನೇ ಶತಕದ ಸಾಧನೆ ಮಾಡಿದ್ದಾರೆ.

ರಚಿನ್ ರವೀಂದ್ರ ಈ ಎಲ್ಲ ಐದು ಶತಕಗಳನ್ನು ಐಸಿಸಿ ಏಕದಿನ ಟೂರ್ನಿಗಳಲ್ಲಿ ದಾಖಲಿಸಿದ್ದಾರೆ ಎಂಬ ಗಮನಾರ್ಹವೆನಿಸುತ್ತದೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಇಂದು (ಬುಧವಾರ) ಲಾಹೋರ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ರಚಿನ್ ಶತಕ ಗಳಿಸಿದ್ದಾರೆ.

ಇದೇ ಟೂರ್ನಿಯಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ 'ಎ' ಗುಂಪಿನ ಪಂದ್ಯದಲ್ಲೂ ರಚಿನ್ (112) ಶತಕ ಬಾರಿಸಿದ್ದರು.

25ರ ಹರೆಯದ ರಚಿನ್, ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲೂ ಮಿಂಚಿನ ಬ್ಯಾಟಿಂಗ್ ಪ್ರದರ್ಶಿಸಿದರು. 101 ಎಸೆತಗಳಲ್ಲಿ 13 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 108 ರನ್ ಗಳಿಸಿದರು.

ಐಸಿಸಿ ಏಕದಿನ ಟೂರ್ನಿಗಳಲ್ಲಿ ಕೇವಲ 13 ಇನಿಂಗ್ಸ್ಗಳಲ್ಲೇ ರಚಿನ್ ಐದನೇ ಶತಕದ ಸಾಧನೆ ಮಾಡಿದ್ದಾರೆ. ಆ ಮೂಲಕ ಐಸಿಸಿ ಟೂರ್ನಿಗಳಲ್ಲಿ ಅತಿ ವೇಗದಲ್ಲಿ ಐದು ಶತಕಗಳನ್ನು ಗಳಿಸಿದ ಬ್ಯಾಟರ್ ಎನಿಸಿದ್ದಾರೆ. ಈ ಪಟ್ಟಿಯಲ್ಲಿ ಭಾರತದ ಶಿಖರ್ ಧವನ್ (15 ಇನಿಂಗ್ಸ್) ದಾಖಲೆಯನ್ನು ಮುರಿದಿದ್ದಾರೆ.

ಆ ಮೂಲಕ ಕಿರಿಯ ವಯಸ್ಸಿನಲ್ಲೇ ಐಸಿಸಿ ಟೂರ್ನಿಗಳಲ್ಲಿ ನ್ಯೂಜಿಲೆಂಡ್ನ ಯಶಸ್ವಿ ಬ್ಯಾಟರ್ಗಳ ಸಾಲಿನಲ್ಲಿ ಗುರುತಿಸಿಕೊಂಡಿದ್ದಾರೆ.

ಚಾಂಪಿಯನ್ಸ್ ಟ್ರೋಫಿಯ ಒಂದೇ ಆವೃತ್ತಿಯಲ್ಲಿ ಒಂದಕ್ಕಿಂತ ಹೆಚ್ಚು ಶತಕ ಗಳಿಸಿದ ನ್ಯೂಜಿಲೆಂಡ್ ಬ್ಯಾಟರ್ ಎಂಬ ಹಿರಿಮೆಗೂ ರಚಿನ್ ಭಾಜನರಾಗಿದ್ದಾರೆ.
.Champions Trophy: ಆತಿಥೇಯ ದೇಶದಲ್ಲಿಲ್ಲ ಫೈನಲ್; ಪಾಕ್ ಮಾಜಿ,ಅಭಿಮಾನಿಗಳ ಆಕ್ರೋಶ.ಇಲ್ಲಿಯವರೆಗೆ ಪರಿಪೂರ್ಣವಾದ ಆಟವನ್ನು ಆಡಿಲ್ಲ, ಫೈನಲ್ನಲ್ಲಿ ನಿರೀಕ್ಷೆ: ಗಂಭೀರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.