ನವದೆಹಲಿ: ಇದೇ 14ರಿಂದ ಬಾಂಗ್ಲಾದೇಶದ ವಿರುದ್ಧಆರಂಭವಾಗಲಿರುವ ಟೆಸ್ಟ್ ಸರಣಿಗೆ ಟೀಂ ಇಂಡಿಯಾದಲ್ಲಿ ಬದಲಾವಣೆಗಳಾಗಿವೆ.
ಗಾಯದ ಸಮಸ್ಯೆಯಿಂದಾಗಿ ರೋಹಿತ್ ಶರ್ಮಾ ಅವರು ಮೊದಲ ಟೆಸ್ಟ್‌ನಿಂದ ಹೊರಗುಳಿಯಲಿದ್ದಾರೆ. ಕೆ.ಎಲ್ ರಾಹುಲ್ ನಾಯಕತ್ವ ನಿಭಾಯಿಸಲಿದ್ದಾರೆ. ರೋಹಿತ್ ಸ್ಥಾನಕ್ಕೆ ಅಭಿಮನ್ಯು ಈಶ್ವರನ್ ಅವರನ್ನು ನಿಯೋಜಿಸಲಾಗಿದೆ.
ಮೊಹಮ್ಮದ್ ಶಮಿ ಮತ್ತು ರವೀಂದ್ರ ಜಡೇಜಾ ಟೆಸ್ಟ್ ಸರಣಿಯಿಂದಲೇ ಹೊರಬಿದ್ದಿದ್ದಾರೆ. ಅವರ ಸ್ಥಾನಕ್ಕೆ ನವದೀಪ್ ಸೈನಿ ಮತ್ತು ಸೌರಭ್ ಕುಮಾರ್ ಬಂದಿದ್ದಾರೆ.
ಮೊದಲ ಟೆಸ್ಟ್ ಇದೇ 14ರಂದು ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ನಡೆಯಲಿದೆ. ಎರಡನೇ ಟೆಸ್ಟ್ 22ರಿಂದ ಡಾಕಾದ ಶೇರ್ ಇ ಬಾಂಗ್ಲಾ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.
ಆಯ್ಕೆ ಸಮಿತಿಯುವೇಗದ ಬೌಲರ್ ಜಯದೇವ್ ಉನದ್ಕತ್ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.