ಮುಂಬೈ: ಸದ್ಯ ನಡೆಯುತ್ತಿರುವ ಐಪಿಎಲ್ ಟೂರ್ನಿಯ ಮಧ್ಯದಲ್ಲಿಯೇ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ನಾಯಕನನ್ನು ಬದಲಾವಣೆ ಮಾಡಿದ್ದು ಸರಿಯಲ್ಲ. ಇದು ಅಚ್ಚರಿ ಮೂಡಿಸಿದೆ ಎಂದು ಮಾಜಿ ಕ್ರಿಕೆಟಿಗ ಅಜಿತ್ ಅಗರಕರ್ ಹೇಳಿದ್ದಾರೆ.

ಕೆಕೆಆರ್ ನಾಯಕರಾಗಿದ್ದ ದಿನೇಶ್ ಕಾರ್ತಿಕ್ ಅವರುಹೋದ ವಾರ ನಾಯಕತ್ವದಿಂದ ಕೆಳಗಿಳಿದಿದ್ದರು.ಇಂಗ್ಲೆಂಡ್ ತಂಡದ ನಾಯಕ ಎಯಾನ್ ಮಾರ್ಗನ್ ಅವರಿಗೆ ನಾಯಕತ್ವದ ಹೊಣೆ ನೀಡಲಾಗಿತ್ತು. ನಾಯಕತ್ವ ಬದಲಾವಣೆಯಾದ ದಿನವೇ (ಅ.16) ಮುಂಬೈ ಇಂಡಿಯನ್ಸ್ ವಿರುದ್ಧ ಕೆಕೆಆರ್, 8 ವಿಕೆಟ್ ಅಂತರದ ಸೋತಿತ್ತು. ಆದರೆ, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡಿದ ನಂತರದ ಪಂದ್ಯದಲ್ಲಿ ಜಯದ ಹಾದಿಗೆ ಮರಳಿತ್ತು.

ಈ ಕುರಿತು ಸ್ಟಾರ್ ಸ್ಪೋರ್ಟ್ಸ್ ವಾಹಿ ನಿಯಲ್ಲಿ ಮಾತನಾಡಿರುವ ಅಜಿತ್,‘ ಏಳು ಪಂದ್ಯಗಳ ಆಟ ಮುಕ್ತಾಯವಾಗಿ, ನಿಮ್ಮ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾಗ ನಾಯಕತ್ವ ಬದಲಾವಣೆ ಮಾಡುವುದು ಸರಿಯಾದ ಕ್ರಮ ಎಂದು ನನಗನಿಸುವುದಿಲ್ಲ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.