ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಪಾಕ್ ಪಿಚ್‌ ಮೇಲೆ ಕಣ್ಣು

ಚೆನ್ನೈ ಸೂಪರ್ ಕಿಂಗ್ಸ್‌–ರಾಜಸ್ಥಾನ್ ರಾಯಲ್ಸ್ ಹಣಾಹಣಿ ಇಂದು
Last Updated 30 ಮಾರ್ಚ್ 2019, 19:21 IST
ಅಕ್ಷರ ಗಾತ್ರ

ಚೆನ್ನೈ : ರನ್‌ಗಳ ಹೊಳೆ ಹರಿಯದಿದ್ದರೆ ಐಪಿಎಲ್ ಪಂದ್ಯದ ಮಜಾ ಸಿಗಲು ಸಾಧ್ಯವೇ ಇಲ್ಲ ಎಂಬ ಮನೋಭಾವ ಬಹುತೇಕ ಚುಟುಕು ಕ್ರಿಕೆಟ್ ಪ್ರಿಯರದ್ದು.

ಆದರೆ ಇದಕ್ಕೆ ವ್ಯತಿರಿಕ್ತವಾಗಿ ಮಾರ್ಚ್‌ 23ರಂದು ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಒಟ್ಟು 141 ರನ್‌ಗಳು ಮಾತ್ರ ಹರಿದಿದ್ದವು. ಸಾಕಷ್ಟು ಟೀಕೆಗಳೂ ವ್ಯಕ್ತವಾಗಿದ್ದವು.

ಇದೀಗ ಮತ್ತೊಮ್ಮೆ ಈ ಪಿಚ್‌ನ ಸತ್ವಪರೀಕ್ಷೆ ನಡೆಯಲಿದೆ. ಭಾನುವಾರ ಇಲ್ಲಿ ನಡೆಯಲಿರುವ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ ಮತ್ತು ರಾಜಸ್ಥಾನ್ ರಾಯಲ್ಸ್‌ ನಡುವಣ ಪಂದ್ಯದಲ್ಲಿ ಪಿಚ್‌ ಯಾವ ರೀತಿ ಇರಲಿದೆ ಎಂಬ ಕುತೂಹಲ ಗರಿಗೆದರಿದೆ. ಮಹೇಂದ್ರಸಿಂಗ್ ಧೋನಿ ನಾಯಕತ್ವದ ಚೆನ್ನೈ ಬಳಗವು ತನ್ನ ಮೊದಲ ಎರಡೂ ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ.

ಮೊದಲ ಪಂದ್ಯದಲ್ಲಿ ಅನುಭವಿ ಸ್ಪಿನ್ನರ್ ಹರಭಜನ್ ಸಿಂಗ್ ಮತ್ತು ಮಧ್ಯಮವೇಗಿ ಡ್ವೆನ್ ಬ್ರಾವೊ ಮಿಂಚಿದ್ದರು.

ಶೇನ್ ವಾಟ್ಸನ್, ಸುರೇಶ್ ರೈನಾ, ಅಂಬಟಿ ರಾಯುಡು, ಫಾಫ್ ಡು ಪ್ಲೆಸಿ ಅವರಂತಹ ಅನುಭವಿ ಬ್ಯಾಟ್ಸ್‌ಮನ್‌ಗಳ ಬಲ ತಂಡಕ್ಕೆ ಇದೆ. ಇಮ್ರಾನ್ ತಾಹೀರ್, ಶಾರ್ದೂಲ್ ಠಾಕೂರ್ ಅವರು ಬೌಲಿಂಗ್ ವಿಭಾಗದಲ್ಲಿ ಮಿಂಚುತ್ತಿದ್ದಾರೆ. ಆಲ್‌ರೌಂಡರ್ ಕೇದಾರ್ ಜಾಧವ್ ಮತ್ತು ಡ್ವೆನ್ ಬ್ರಾವೊ ತಮ್ಮ ಉತ್ತಮ ಆಟದಿಂದ ಇದುವರೆಗೆ ತಂಡಕ್ಕೆ ಆಸರೆಯಾಗಿದ್ದಾರೆ.

ಆದರೆ, ರಾಜಸ್ಥಾನ್ ರಾಯಲ್ಸ್ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿದೆ. ಆಡಿರುವ ಎರಡೂ ಪಂದ್ಯಗಳಲ್ಲಿ ಸೋತಿದೆ. ಕಿಂಗ್ಸ್‌ ಇಲೆವನ್ ಎದುರಿನ ಮೊದಲ ಪಂದ್ಯದಲ್ಲಿ 184 ರನ್‌ಗಳ ಗುರಿ ಬೆನ್ನತ್ತಿ ಎಡವಿತ್ತು. ಆದರೆ, ಎರಡನೇ ಪಂದ್ಯದಲ್ಲಿ ಸನ್‌ರೈಸರ್ಸ್‌ ಎದುರು ಸಂಜು ಸ್ಯಾಮ್ಸನ್‌ ಭರ್ಜರಿ ಶತಕದಿಂದ 198 ರನ್‌ಗಳ ದೊಡ್ಡ ಗುರಿ ನೀಡಿಯೂ ಸೋತಿತು. ಬೌಲಿಂಗ್ ವಿಭಾಗವು ನಿರೀಕ್ಷೆಗೆ ತಕ್ಕಂತೆ ಆಡಿದರೆ ಎದುರಾಳಿ ತಂಡಕ್ಕೆ ಕಠಿಣ ಪೈಪೋಟಿ ಎದುರಾಗಬಹುದು.

ತಂಡಗಳು:

ಚೆನ್ನೈ ಸೂಪರ್ ಕಿಂಗ್ಸ್‌: ಮಹೇಂದ್ರಸಿಂಗ್ ಧೋನಿ (ನಾಯಕ–ವಿಕೆಟ್‌ಕೀಪರ್), ಸುರೇಶ್ ರೈನಾ, ಅಂಬಟಿ ರಾಯುಡು, ಶೇನ್ ವಾಟ್ಸನ್, ಫಾಫ್ ಡು ಪ್ಲೆಸಿ, ಮುರಳಿ ವಿಜಯ್, ಕೇದಾರ್ ಜಾಧವ್, ಸ್ಯಾಮ್ ಬಿಲ್ಲಿಂಗ್ಸ್, ರವೀಂದ್ರ ಜಡೇಜ, ಧ್ರುವ ಶೋರೆ, ಚೈತನ್ಯ ಬಿಷ್ಣೊಯಿ, ೃತುರಾಜ್ ಗಾಯಕವಾಡ, ಡ್ವೆನ್ ಬ್ರಾವೊ, ಕರಣ್ ಶರ್ಮಾ, ಇಮ್ರಾನ್ ತಾಹೀರ್, ಹರಭಜನ್ ಸಿಂಗ್, ಮಿಚೆಲ್ ಸ್ಯಾಂಟನರ್, ಶಾರ್ದೂಲ್ ಠಾಕೂರ್, ಮೋಹಿತ್ ಶರ್ಮಾ, ಕೆ. ಎಂ. ಆಸಿಫ್, ದೀಪಕ್ ಚಾಹರ್.

ರಾಜಸ್ಥಾನ್ ರಾಯಲ್ಸ್: ಅಜಿಂಕ್ಯ ರಹಾನೆ (ನಾಯಕ), ಸ್ಟೀವ್ ಸ್ಮಿತ್, ಬೆನ್ ಸ್ಟೋಕ್ಸ್‌, ಜೋಫ್ರಾ ಆರ್ಚರ್, ಜೋಸ್ ಬಟ್ಲರ್, ಆ್ಯಷ್ಟನ್ ಟರ್ನರ್, ಈಶ್ ಸೋಧಿ, ಒಷೇನ್ ಥಾಮಸ್, ಲಿಯಾಮ್ ಲಿವಿಂಗ್‌ಸ್ಟೋನ್, ಸಂಜು ಸ್ಯಾಮ್ಸನ್, ಶುಭಂ ರಾಂಜಣೆ, ಸ್ಟುವರ್ಟ್ ಬಿನ್ನಿ, ಶ್ರೇಯಸ್ ಗೋಪಾಲ್, ಸುದೇಶನ್ ಮಿಧುನ್, ಜಯದೇವ್ ಉನದ್ಕತ್, ಪ್ರಶಾಂತ್ ಚೋಪ್ರಾ, ಮಹಿಪಾಲ್ ಲೊಮ್ರೊರ್, ಆರ್ಯಮನ್ ಬಿರ್ಲಾ, ರಿಯಾನ್ ಪರಾಗ್, ಧವಳ್ ಕುಲಕರ್ಣಿ, ಕೃಷ್ಣಪ್ಪ ಗೌತಮ್, ವರುಣ್ ಆ್ಯರನ್, ಶಶಾಂಕ್ ಸಿಂಗ್, ಮನನ್ ವೊಹ್ರಾ, ರಾಹುಲ್‌ ತ್ರಿಪಾಠಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT