ಗುರುವಾರ , ಸೆಪ್ಟೆಂಬರ್ 24, 2020
26 °C

ಸಿಎಸ್‌ಕೆಗೆ ಮತ್ತೊಂದು ಆಘಾತ: ಐಪಿಎಲ್‌ನಿಂದ ಹಿಂದೆ ಸರಿದ ಹರಭಜನ್ ಸಿಂಗ್

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

Harbhajan Singh

ಚೆನ್ನೈ: ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ಪ್ರಮುಖ ಸ್ಪಿನ್ನರ್ ಹರಭಜನ್ ಸಿಂಗ್ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಪೋರ್ಟ್‌ಸ್ಟಾರ್ ವರದಿ ಮಾಡಿದೆ. ವೈಯಕ್ತಿಕ ಕಾರಣಗಳಿಂದಾಗಿ ಐಪಿಎಲ್‌ನಲ್ಲಿ ಆಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ ಎನ್ನಲಾಗಿದೆ.

ಐಪಿಎಲ್‌ ನಿಯಮಗಳ ಪ್ರಕಾರ, ಅದರಲ್ಲೂ ಕೊರೊನಾದ ಈ ಸಂದರ್ಭದಲ್ಲಿ ಯಾವನೇ ಆಟಗಾರ ಪಂದ್ಯದಲ್ಲಿ ಭಾಗವಹಿಸುವುದಿಲ್ಲ ಎಂದು ಒಮ್ಮೆ ಅಧಿಕಾರಿಗಳಿಗೆ ತಿಳಿಸಿದರೆ ನಂತರ ಪಾಲ್ಗೊಳ್ಳಲು ಅವಕಾಶ ಇರುವುದಿಲ್ಲ. 

ದೀಪಕ್ ಚಾಹರ್ ಮತ್ತು ರುತುರಾಜ್ ಗಾಯಕ್‌ವಾಡ್ ಕೊರೊನಾ ಸೋಂಕಿತರಾಗಿದ್ದು, ಸುರೇಶ್ ರೈನಾ ಸಹ ಐಪಿಎಲ್‌ನಲ್ಲಿ ಭಾಗವಹಿಸುತ್ತಿಲ್ಲ. ಇದೀಗ ಹರಭಜನ್ ಸಹ ಕಣದಿಂದ ಹಿಂದೆ ಸರಿದಿರುವುದು ತಂಡಕ್ಕೆ ಆಘಾತ ಉಂಟುಮಾಡಿದೆ ಎಂದು ವರದಿ ಉಲ್ಲೇಖಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು