ಗುರುವಾರ , ಜೂನ್ 17, 2021
27 °C

ಕ್ರಿಕೆಟ್ ದಕ್ಷಿಣ ಆಫ್ರಿಕಾ ಅಧ್ಯಕ್ಷ ಕ್ರಿಸ್ ನೆಂಜಾನಿ ರಾಜೀನಾಮೆ

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಜೊಹಾನ್ಸ್‌ಬರ್ಗ್‌: ಕ್ರಿಕೆಟ್ ದಕ್ಷಿಣ ಆಫ್ರಿಕಾದ (ಸಿಎಸ್‌ಎ) ಅಧ್ಯಕ್ಷ ಕ್ರಿಸ್ ನೆಂಜಾನಿ ಅವರು ತಮ್ಮ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ. ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆಗೆ ಎರಡು ತಿಂಗಳು ಬಾಕಿ ಇದ್ದಾಗ ಅವರ ಈ ನಡೆ ಕುತೂಹಲಕ್ಕೆ ಕಾರಣವಾಗಿದೆ. ರಾಜೀನಾಮೆಗೆ ಕಾರಣ ಏನು ಎಂಬುದನ್ನು ಸಂಸ್ಥೆ ಸ್ಪಷ್ಟಪಡಿಸಲಿಲ್ಲ.

ಮೂರು ವರ್ಷಗಳ ಎರಡು ಅವಧಿಯನ್ನು ಕಳೆದ ವರ್ಷವೇ ಪೂರೈಸಿದ ಅವರು ಸಿಎಸ್‌ಎ ನಿಯಮಾವಳಿಗಳಲ್ಲಿ ಬದಲಾವಣೆ ತಂದು ಅಧಕಾರದ ಅವಧಿಯನ್ನು ಒಂದು ವರ್ಷ ವಿಸ್ತರಿಸಿಕೊಂಡಿದ್ದರು. ಅಶಿಸ್ತಿನ ನಡವಳಿಕೆಯಿಂದಾಗಿ ಕಳೆದ ಡಿಸೆಂಬರ್‌ನಲ್ಲಿ ಅಮಾನತುಗೊಂಡಿದ್ದ ಮುಖ್ಯ ಕಾರ್ಯನಿರ್ವಾಹಕ ತಬಾಂಗ್ ಮೊರಿ ಅವರ ಪರವಾಗಿ ನಿಲ್ಲುವುದಕ್ಕಾಗಿಯೇ ನೆಂಜಾನಿ ಅವರ ಅಧಿಕಾರ ಅವಧಿಯನ್ನು ವಿಸ್ತರಿಸಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಐವರು ಪತ್ರಕರ್ತರಿಗೆ ನೀಡಿದ್ದ ಮಾನ್ಯತೆಯನ್ನು ರದ್ದು ಮಾಡಲಾಗಿತ್ತು.

ಈಚೆಗೆ ದಕ್ಷಿಣ ಆಫ್ರಿಕಾ ಕ್ರಿಕೆಟ್‌ನಲ್ಲಿ ವರ್ಣಭೇದ ನೀತಿ ಆರೋಪವೂ ಕೇಳಿಬಂದಿತ್ತು. ತಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಗುತ್ತಿಲ್ಲ ಎಂದು ಕೆಲವು ಆಟಗಾರರು ದೂರಿದ್ದರು. ಈ ನಡುವೆ ಅಮಾನತಾಗಿದ್ದ ಕಾಲದಲ್ಲೂ ಪೂರ್ಣಪ್ರಮಾಣದ ಸಂಭಾವನೆ ಪಡೆಯುತ್ತಿರುವ ಮೊರಿ ಅವರನ್ನು ಸದ್ಯದಲ್ಲೇ ವಜಾಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಮೊರಿ ಕುರಿತು ಕ್ರಿಕೆಟ್ ದಕ್ಷಿಣ ಆಫ್ರಿಕಾ ಸೋಮವಾರ ಅಧಿಕೃತವಾಗಿ ಏನನ್ನೂ ಹೇಳಲಿಲ್ಲ. ಆದರೆ ಮುಖ್ಯ ಆಪರೇಟಿಂಗ್ ಅಧಿಕಾರಿ ನಾಸಿ ಅಪಯ ಅವರನ್ನು ವಜಾ ಮಾಡಿರುವುದಾಗಿ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು