ಬುಧವಾರ, ಏಪ್ರಿಲ್ 14, 2021
23 °C

ಒಲಿಂಪಿಕ್ಸ್‌: ಬಿಡ್‌ ಸಲ್ಲಿಕೆಗೆ ಕೇಜ್ರಿವಾಲ್ ಒಲವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೆಹಲಿಯಲ್ಲಿ 2048ರಲ್ಲಿ ಒಲಿಂಪಿಕ್ ಕೂಟವನ್ನು ಆಯೋಜಿಸಲು ಬಿಡ್ ಸಲ್ಲಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.

1951ರಲ್ಲಿ ದೆಹಲಿಯಲ್ಲಿ ಮೊದಲ ಏಷ್ಯನ್ ಗೇಮ್ಸ್‌  ಆಯೋಜನೆಯಾಗಿತ್ತು. 1982ರಲ್ಲಿ ಒಂಬತ್ತನೇ ಏಷ್ಯನ್ ಗೇಮ್ಸ್‌ ಮತ್ತು 2010ರಲ್ಲಿ  ಕಾಮನ್‌ವೆಲ್ತ್ ಗೇಮ್ಸ್‌ ಕೂಡ ಇಲ್ಲಿ ಆಯೋಜನೆಯಾಗಿದ್ದವು.

’ಒಲಿಂಪಿಕ್ ಕೂಟಕ್ಕೆ ಅಗತ್ಯವಿರುವ ಎಲ್ಲ ಮೂಲಸೌಲಭ್ಯಗಳನ್ನೂ ಇಲ್ಲಿ ಅಭಿವೃದ್ಧಿಪಡಿಸಲಾಗುವುದು. ದೆಹಲಿಯಲ್ಲಿ ಒಲಿಂಪಿಕ್ ಆಯೋಜನೆ ಮಾಡಬೇಕೆನ್ನುವುದು ನಮ್ಮ ದೊಡ್ಡ ಕನಸು‘ ಎಂದು ಕೇಜ್ರಿವಾಲ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು