ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Commonwealth Games ಮಹಿಳಾ ಕ್ರಿಕೆಟ್: ಭಾರತ ಎದುರು ಆಸ್ಟ್ರೇಲಿಯಾ ಬ್ಯಾಟಿಂಗ್

Last Updated 7 ಆಗಸ್ಟ್ 2022, 16:16 IST
ಅಕ್ಷರ ಗಾತ್ರ

ಬರ್ಮಿಂಗ್‌ಹ್ಯಾಮ್‌:ಕಾಮನ್‌ವೆಲ್ತ್ ಗೇಮ್ಸ್ 2022ರ ಮಹಿಳಾ ಕ್ರಿಕೆಟ್‌ನ ಫೈನಲ್‌ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್‌ ಗೆದ್ದಿರುವ ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್‌ ಆಯ್ದುಕೊಂಡಿದೆ.

ಬರ್ಮಿಂಗ್‌ ಹ್ಯಾಮ್‌ನಲ್ಲಿ ನಟೆಯುತ್ತಿರುವ ಪಂದ್ಯದಲ್ಲಿ ಆಸ್ಟ್ರೇಲಿಯಾ ಇನಿಂಗ್ಸ್‌ ಆರಂಭಿಸಿದೆ. ಮೂರು ಓವರ್‌ಗಳ ಆಟ ಮುಕ್ತಾಯವಾಗಿದ್ದು, 1 ವಿಕೆಟ್‌ ನಷ್ಟಕ್ಕೆ 14 ರನ್ ಗಳಿಸಿದೆ. 7 ರನ್‌ ಗಳಿಸಿದ್ದಅಲಸ್ಯಾ ಹೀಲಿ ಅವರನ್ನು ರೇಣುಕಾ ಸಿಂಗ್ ಎಲ್‌ಬಿ ಬಲೆಗೆ ಬೀಳಿಸಿದ್ದಾರೆ.

ಸದ್ಯ ನಾಯಕಿ ಮೆಗ್‌ ಲ್ಯಾನಿಂಗ್‌ (1) ಕ್ರೀಸ್‌ಗೆ ಬಂದಿದ್ದು, ಇನ್ನೊಂದು ತುದಿಯಲ್ಲಿಬೆತ್‌ ಮೂನಿ (5) ಆಡುತ್ತಿದ್ದಾರೆ.

ಭಾರತ ತಂಡ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ 4 ರನ್‌ ಅಂತರದಿಂದಹಾಗೂ ಆಸ್ಟ್ರೇಲಿಯಾ ಪಡೆ ನ್ಯೂಜಿಲೆಂಡ್‌ ವಿರುದ್ಧ 5 ವಿಕೆಟ್‌ಗಳಿಂದ ಜಯಿಸಿಫೈನಲ್‌ಗೆ ಲಗ್ಗೆ ಇಟ್ಟಿವೆ. ಇಲ್ಲಿ ಪ್ರಶಸ್ತಿ ಗೆಲ್ಲುವ ತಂಡ ಚಿನ್ನದ ಪದಕಕ್ಕೆ ಕೊರಳೊಡ್ಡಲಿದೆ. ರನ್ನರ್ಸ್‌ಅಪ್‌ ಆದವರಿಗೆ ಬೆಳ್ಳಿ ಪದಕ ಸಿಗಲಿದೆ.

ಇದೇ ದಿನ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್‌ ಪಡೆ ಇಂಗ್ಲೆಂಡ್‌ ವಿರುದ್ಧ ಗೆದ್ದ 8 ವಿಕೆಟ್‌ಗಳಿಂದ ಜಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT