ಬುಧವಾರ, ಏಪ್ರಿಲ್ 8, 2020
19 °C

ಕೂಚ್ ಬೆಹಾರ್ ಕ್ರಿಕೆಟ್: ಪಂದ್ಯ ಡ್ರಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಕರ್ನಾಟಕ ಹಾಗೂ ಹೈದರಾಬಾದ್ ತಂಡಗಳ ನಡುವಣ 19 ವರ್ಷದ ಒಳಗಿನವರ ಕೂಚ್ ಬೆಹಾರ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಪಂದ್ಯ ಡ್ರಾದಲ್ಲಿ ಅಂತ್ಯ ಕಂಡಿತು.

ಇಲ್ಲಿನ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆದ ಹಣಾಹಣಿಯಲ್ಲಿ ಹೈದರಾಬಾದ್, ಮೊದಲ ಇನಿಂಗ್ಸ್‌ನಲ್ಲಿ 347 ರನ್ ಗಳಿಸಿತ್ತು. ಇನಿಂಗ್ಸ್ ಮುನ್ನಡೆ ಪಡೆದಿದ್ದ ಈ ತಂಡ ಎರಡನೇ ಇನಿಂಗ್ಸ್‌ನಲ್ಲಿ 9 ವಿಕೆಟ್ ನಷ್ಟಕ್ಕೆ 260 ರನ್‌ ಕಲೆ ಹಾಕಿ ಡಿಕ್ಲೇರ್ಡ್‌ ಮಾಡಿಕೊಂಡಿತ್ತು. ಕರ್ನಾಟಕ ತಂಡ ಪ್ರಥಮ ಇನಿಂಗ್ಸ್‌ನಲ್ಲಿ 266 ರನ್ ಗಳಿಸಿತ್ತು. ಕೊನೆಯ ದಿನವಾದ ಸೋಮವಾರ ಎರಡನೇ ಇನಿಂಗ್ಸ್‌ನಲ್ಲಿ 22 ಓವರ್‌ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿದ್ದ ವೇಳೆ ಪಂದ್ಯಕ್ಕೆ ತೆರೆ ಬಿತ್ತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು