ಮಂಗಳವಾರ, ಮಾರ್ಚ್ 31, 2020
19 °C
ಬಿಸಿಸಿಐ ಕೂಚ್ ಬಿಹಾರ್‌ ಟ್ರೋಫಿ ಕ್ರಿಕೆಟ್ ಪಂದ್ಯ

ಇಂದಿನಿಂದ ಕರ್ನಾಟಕ ಗುಜರಾತ್ ಸೆಣಸು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕೆಎಸ್‍ಸಿಎ ಕ್ರೀಡಾಂಗಣದಲ್ಲಿ (ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ) ನ.29ರಿಂದ ಡಿ.2ರ ವರೆಗೆ 19 ವರ್ಷದೊಳಗಿನ ಬಿಸಿಸಿಐ ಕೂಚ್ ಬಿಹಾರ್‌ ಟ್ರೋಫಿ ಕ್ರಿಕೆಟ್ ಪಂದ್ಯ ನಡೆಯಲಿದೆ ಎಂದು ಕೆಎಸ್‍ಸಿಎ ಶಿವಮೊಗ್ಗ ವಲಯ ಸಂಚಾಲಕ ಡಿ.ಎಸ್.ಅರುಣ್ ಹೇಳಿದರು.

ಕರ್ನಾಟಕ ಮತ್ತು ಗುಜರಾತ್ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಈಗಾಗಲೇ ಗುಜರಾತ್ ಮತ್ತು ಕರ್ನಾಟಕದ ಆಟಗಾರರು ಶಿವಮೊಗ್ಗಕ್ಕೆ ಬಂದಿದ್ದು, ಅಭ್ಯಾಸದಲ್ಲಿ ತೊಡಗಿದ್ದಾರೆ. ಪಂದ್ಯ ವೀಕ್ಷಣೆಗೆ ಉಚಿತ
ಅವಕಾಶವಿದೆ. ಬೆಳಿಗ್ಗೆ 9.30ರಿಂದ ಸಂಜೆ 4.30ರ ವರೆಗೆ ಪಂದ್ಯ ನಡೆಯಲಿದೆ. 29 ರಂದು ಬೆಳಿಗ್ಗೆ 8.30ಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಪಂದ್ಯಕ್ಕೆ ಚಾಲನೆ ನೀಡುವರು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.  

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು