ಶುಕ್ರವಾರ, ಏಪ್ರಿಲ್ 10, 2020
19 °C

ಕೋವಿಡ್–19 ಭೀತಿ | ಇಂಗ್ಲೆಂಡ್‌ನಲ್ಲಿ ಮೇ 28ರವರೆಗೆ ಕ್ರಿಕೆಟ್ ಚಟುವಟಿಕೆ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಂಡನ್‌: ಜಾಗತಿಕ ಪಿಡುಗು ಕೋವಿಡ್‌–19 ಭೀತಿಯಿಂದಾಗಿ ಮೇ 28ರ ವರೆಗೆ ವೃತ್ತಿಪರ ಕ್ರಿಕೆಟ್‌ ಚಟುವಟಿಕೆಗಳನ್ನು ನಿಲ್ಲಿಸಲು ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ (ಇಸಿಬಿ) ತೀರ್ಮಾನಿಸಿದೆ.

ವೃತ್ತಿಪರ ಕ್ರಿಕೆಟ್‌ ಮಂಡಳಿ (ಪಿಸಿಎ), ಮೆಲ್ಬೋರ್ನ್‌ ಕ್ರಿಕೆಟ್‌ ಕ್ಲಬ್‌ (ಎಂಸಿಸಿ) ಜೊತೆಗಿನ ಸಭೆ ನಂತರ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿದರೆ, ಇನ್ನೂ ಏಳು ವಾರಗಳ ಕಾಲ ಕ್ರಿಕೆಟ್‌ ಚಟುವಟಿಕೆಗಳನ್ನು ಮುಂದೂಡುವುದು ಉತ್ತಮ ಎಂದು ಇಸಿಬಿ ಹೇಳಿದೆ.

ಜೂನ್‌, ಜುಲೈ ಅಥವಾ ಆಗಸ್ಟ್‌ನಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ಮೂರು ಟೆಸ್ಟ್ ಪಂದ್ಯಗಳ ಸರಣಿ ಮತ್ತು ಟಿ20 ಸರಣಿ ಹಾಗೂ ಭಾರತ ಮಹಿಳಾ ತಂಡದ ವಿರುದ್ಧ ಟೂರ್ನಿ ಆಯೋಜಿಸುವ ಕುರಿತು ಯೋಜಿಸುತ್ತಿರುವುದಾಗಿಯೂ ತಿಳಿಸಿದೆ.

ಪ್ರಪಂಚದಾದ್ಯಂತ ಶುಕ್ರವಾರದವರೆಗೆ ಸುಮಾರು 2,63 ಲಕ್ಷ ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಸಾವಿನ ಸಂಖ್ಯೆ 11 ಸಾವಿರ ದಾಟಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು