ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಂಖೆಡೆ: ಅಪೆಕ್ಸ್‌ ಸದಸ್ಯರಿಗೆ ನೆಗೆಟಿವ್ ವರದಿ ಕಡ್ಡಾಯ

Last Updated 10 ಏಪ್ರಿಲ್ 2021, 13:47 IST
ಅಕ್ಷರ ಗಾತ್ರ

ಮುಂಬೈ: ಅಪೆಕ್ಸ್ ಸಮಿತಿಯ ಸದಸ್ಯರು ವಾಂಖೆಡೆ ಕ್ರೀಡಾಂಗಣ ಪ್ರವೇಶಿಸಬೇಕಾದರೆ ಕೋವಿಡ್–19 ಪರೀಕ್ಷೆ ನಡೆಸಿ ನೆಗೆಟಿವ್ ವರದಿ ಹೊಂದಿರಬೇಕು ಎಂದು ಮುಂಬೈ ಕ್ರಿಕೆಟ್ ಸಂಸ್ಥೆ ತಿಳಿಸಿದೆ. ಶನಿವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್‌–ಚೆನ್ನೈ ಸೂಪರ್ ಕಿಂಗ್ಸ್‌ ನಡುವಿನ ಪಂದ್ಯ ಸೇರಿದಂತೆ ಇಲ್ಲಿ ಐಪಿಎಲ್‌ ಟೂರ್ನಿಯ 10 ಹಣಾಹಣಿಗಳು ಇಲ್ಲಿ ನಡೆಯಲಿವೆ.

‘ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಮಾರ್ಗಸೂಚಿಯ ಪ್ರಕಾರ ಪಂದ್ಯದ ಸಂದರ್ಭದಲ್ಲಿ ಕ್ರೀಡಾಂಗಣಕ್ಕೆ ಬರುವ ಎಲ್ಲ ಅಧಿಕಾರಿಗಳು ಆರ್‌ಟಿ–ಪಿಸಿಆರ್ ಪರೀಕ್ಷೆ ನಡೆಸಿ ನೆಗೆಟಿವ್ ವರದಿ ತರಬೇಕು’ ಎಂದು ಮುಂಬೈ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಸಂಜಯ್ ನಾಯಕ್ ತಿಳಿಸಿದ್ದಾರೆ.

‘ಲಸಿಕೆ ಹಾಕಿಸಿಕೊಂಡವರು ಕೂಡ ಪರೀಕ್ಷೆಗೆ ಕಡ್ಡಾಯವಾಗಿ ಒಳಗಾಗಬೇಕು. ಕ್ರೀಡಾಂಗಣದ ಒಳಗೆ ಪ್ರವೇಶಿಸುವಾಗ ವರದಿಯನ್ನು ತೋರಿಸಬೇಕು’ ಎಂದು ಅವರು ವಿವರಿಸಿದರು.

ವಾಂಖೆಡೆ ಕ್ರೀಡಾಂಗಣದ 10 ಸಿಬ್ಬಂದಿಗೆ ಈಗಾಗಲೇ ಕೋವಿಡ್ ಸೋಂಕು ತಗುಲಿತ್ತು. ಆದರೆ ನಂತರ ಪರೀಕ್ಷಿಸಿದಾಗ ನೆಗೆಟಿವ್ ವರದಿ ಬಂದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT