ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್: ಬ್ಯಾಟಿಂಗ್‌ ಆರಂಭಿಸಿದ ಭಾರತಕ್ಕೆ ಆರಂಭಿಕ ಆಘಾತ

Last Updated 6 ಡಿಸೆಂಬರ್ 2018, 1:45 IST
ಅಕ್ಷರ ಗಾತ್ರ

ಅಡಿಲೇಡ್‌: ಓವಲ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿರುವ ಭಾರತ ತಂಡಕ್ಕೆ ಆರಂಭಿಕ ಆಘಾತ ಎದುರಾಗಿದೆ.

ಇನಿಂಗ್ಸ್ ಆರಂಭಿಸಿದ ಮುರುಳಿ ವಿಜಯ್‌(11)ಹಾಗೂ ಕೆ.ಎಲ್. ರಾಹುಲ್(02) ಉತ್ತಮ ಅಡಿಪಾಯ ಹಾಕುವಲ್ಲಿ ವಿಫಲರಾದರು. ಬಳಿಕ ಬಂದ ನಾಯಕ ವಿರಾಟ್ ಕೊಹ್ಲಿ(03) ಸಹ ಹೆಚ್ಚು ಹೊತ್ತು ನಿಲ್ಲಲಿಲ್ಲ.

ಸದ್ಯ ಟೆಸ್ಟ್‌ ಪರಿಣತ ಬ್ಯಾಟ್ಸ್‌ಮನ್‌ ಚೇತೇಶ್ವರ ಪೂಜಾರ(11) ಹಾಗೂ ಅಜಿಂಕ್ಯಾ ರಹಾನೆ(13) ಕ್ರೀಸ್‌ನಲ್ಲಿದ್ದು, 20 ಓವರ್‌ಗಳ ಮುಕ್ತಾಯಕ್ಕೆ ಮೂರು ವಿಕೆಟ್‌ ಕಳೆದುಕೊಂಡು 40ರನ್‌ ಗಳಿಸಿದೆ.

ಬಾರ್ಡರ್‌–ಗಾವಸ್ಕರ್‌ ಸರಣಿಯ ಮೊದಲ ಪಂದ್ಯ ಗುರುವಾರದಿಂದ (ಭಾರತೀಯ ಕಾಲಮಾನ ಬೆಳಿಗ್ಗೆ 5.30) ಆರಂಭವಾಗಿದೆ.

ತಂಡಗಳು ಇಂತಿವೆ

ಭಾರತ: ವಿರಾಟ್‌ ಕೊಹ್ಲಿ (ನಾಯಕ), ಮುರಳಿ ವಿಜಯ್‌, ಕೆ.ಎಲ್‌.ರಾಹುಲ್‌, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ರೋಹಿತ್‌ ಶರ್ಮಾ, ರಿಷಭ್‌ ಪಂತ್‌, ಪಾರ್ಥೀವ್‌ ಪಟೇಲ್‌, ರವಿಚಂದ್ರನ್‌ ಅಶ್ವಿನ್‌, ರವೀಂದ್ರ ಜಡೇಜ, ಕುಲದೀಪ್‌ ಯಾದವ್‌, ಮೊಹಮ್ಮದ್‌ ಶಮಿ, ಇಶಾಂತ್‌ ಶರ್ಮಾ, ಉಮೇಶ್‌ ಯಾದವ್‌, ಜಸ್‌ಪ್ರೀತ್‌ ಬೂಮ್ರಾ ಮತ್ತು ಭುವನೇಶ್ವರ ಕುಮಾರ್‌.

ಆಸ್ಟ್ರೇಲಿಯಾ: ಟಿಮ್‌ ಪೇನ್‌ (ನಾಯಕ), ಜೋಶ್‌ ಹ್ಯಾಜಲ್‌ವುಡ್‌, ಮಿಷೆಲ್‌ ಮಾರ್ಷ್‌, ಪ್ಯಾಟ್‌ ಕಮಿನ್ಸ್‌, ಆ್ಯರನ್‌ ಫಿಂಚ್‌, ಪೀಟರ್‌ ಹ್ಯಾಂಡ್ಸ್‌ಕಂಬ್‌, ಮಾರ್ಕಸ್‌ ಹ್ಯಾರಿಸ್‌, ಟ್ರಾವಿಸ್‌ ಹೆಡ್‌, ಉಸ್ಮಾನ್‌ ಖವಾಜ, ನೇಥನ್‌ ಲಿಯೊನ್‌, ಶಾನ್‌ ಮಾರ್ಷ್‌, ಪೀಟರ್‌ ಸಿಡ್ಲ್‌, ಮಿಷೆಲ್‌ ಸ್ಟಾರ್ಕ್‌ ಮತ್ತು ಕ್ರಿಸ್‌ ಟ್ರೆಮೈನ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT