ಮಂಗಳವಾರ, ಅಕ್ಟೋಬರ್ 22, 2019
22 °C

ಕ್ರಿಕೆಟ್: ಕರ್ನಾಟಕ ತಂಡ ಚುರುಕಿನ ಬೌಲಿಂಗ್

Published:
Updated:

ಹುಬ್ಬಳ್ಳಿ: ಆರಂಭದಲ್ಲಿ ಚುರುಕಿನ ಬೌಲಿಂಗ್ ಮಾಡಿದ ಕರ್ನಾಟಕ ತಂಡದವರು 16 ವರ್ಷದ ಒಳಗಿನವರ ವಿಜಯ್ ಮರ್ಚಂಟ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಪ್ರಾಬಲ್ಯ ಸಾಧಿಸಿದ್ದಾರೆ.

ಇಲ್ಲಿನ ರಾಜನಗರದ ಕೆಎಸ್ ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನದಾಟದ ಭೋಜನ ವಿರಾಮದ ವೇಳೆಗೆ ಹೈದರಾಬಾದ್ 36 ಓವರ್‌ಗಳಲ್ಲಿ 6 ವಿಕೆಟ್‌ಗಳನ್ನು ಕಳೆದುಕೊಂಡು 66 ರನ್ ಗಳಿಸಿದೆ‌.

ಗುರುವಾರ ಜೋರಾಗಿ ಮಳೆ ಬಂದಿದ್ದರಿಂದ ಶುಕ್ರವಾರ ಮೊದಲ ದಿನದಾಟ ನಡೆದಿರಲಿಲ್ಲ. ಆದ್ದರಿಂದ ಶನಿವಾರ ಬೆಳಿಗ್ಗೆ ಟಾಸ್ ನಡೆಯಿತು. ಟಾಸ್ ಗೆದ್ದು ಕರ್ನಾಟಕ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಆರ್. ಧನುಷ್ ಗೌಡ ಎರಡು ವಿಕೆಟ್ ಕಬಳಿಸಿದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)