ಮೆಲ್ಬರ್ನ್: ಆಸ್ಟ್ರೇಲಿಯಾ ಪುರುಷರ ಕ್ರಿಕೆಟ್ ತಂಡದ 2026–27ನೇ ಸಾಲಿನ ವೇಳಾಪಟ್ಟಿಯನ್ನು ‘ಕ್ರಿಕೆಟ್ ಆಸ್ಟ್ರೇಲಿಯಾ’ ಭಾನುವಾರ ಬಿಡುಗಡೆ ಮಾಡಿದ್ದು, ಅದರಂತೆ ಮುಂದಿನ ಜನವರಿಯಲ್ಲಿ ಬಾರ್ಡರ್–ಗಾವಸ್ಕರ್ ಟ್ರೋಫಿ ಸರಣಿ ಆರಂಭವಾಗಲಿದೆ.

ಆಸ್ಟ್ರೇಲಿಯಾ ತಂಡವು ಭಾರತ ಪ್ರವಾಸದಲ್ಲಿ ಐದು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಜನವರಿಯಿಂದ ಮಾರ್ಚ್ವರೆಗೆ ಈ ಸರಣಿಯ ಆಯೋಜನೆಗೊಳ್ಳಲಿದೆ. ಬಿಡುವಿಲ್ಲದ ವೇಳಾಪಟ್ಟಿಯನ್ನು ಹೊಂದಿರುವ ಪ್ಯಾಟ್ ಕಮಿನ್ಸ್ ಪಡೆಯು 2026ರ ಡಿಸೆಂಬರ್ನಿಂದ 2027ರ ಮಾರ್ಚ್ವರೆಗೆ 14 ವಾರಗಳಲ್ಲಿ 10 ಟೆಸ್ಟ್ ಪಂದ್ಯಗಳನ್ನು ಆಡಲಿದೆ.

2026ರ ಆಗಸ್ಟ್ನಲ್ಲಿ ಬಾಂಗ್ಲಾದೇಶ ವಿರುದ್ಧ ಎರಡು ಟೆಸ್ಟ್ ಪಂದ್ಯಗಳೊಂದಿಗೆ ತವರಿನ ಋತು ಪ್ರಾರಂಭವಾಗಲಿದೆ. 2027ರ ಮಾರ್ಚ್ನಲ್ಲಿ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ (ಎಂಸಿಜಿ) ಇಂಗ್ಲೆಂಡ್ ವಿರುದ್ಧ ಟೆಸ್ಟ್ನೊಂದಿಗೆ ಋತು ಕೊನೆಗೊಳ್ಳಲಿದೆ. ಇದು ‘ಕ್ರಿಕೆಟ್ ಆಸ್ಟ್ರೇಲಿಯಾ’ದ 150ನೇ ವಾರ್ಷಿಕೋತ್ಸವದ ಪಂದ್ಯವಾಗಿದೆ.

ಆಸ್ಟ್ರೇಲಿಯಾ ತಂಡದ ದಕ್ಷಿಣ ಆಫ್ರಿಕಾ ಪ್ರವಾಸವು ಸೆಪ್ಟೆಂಬರ್ ಕೊನೆಯ ವಾರದಿಂದ ಅಕ್ಟೋಬರ್ ಅಂತ್ಯದವರೆಗೆ ನಡೆಯಲಿದೆ. ಈ ಪ್ರವಾಸದಲ್ಲಿ ಮೂರು ಏಕದಿನ ಮತ್ತು ಮೂರು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ನವೆಂಬರ್ನಲ್ಲಿ ಇಂಗ್ಲೆಂಡ್ ವಿರುದ್ಧ ಸೀಮಿತ ಓವರ್ಗಳ (ಮೂರು ಏಕದಿನ ಮತ್ತು ಐದು ಟಿ20 ಪಂದ್ಯ) ಸರಣಿ ನಡೆಯಲಿದೆ. ಅದರ ಬೆನ್ನಲ್ಲೇ ನ್ಯೂಜಿಲೆಂಡ್ ವಿರುದ್ಧದ ತವರು ಸರಣಿ ನಡೆಯಲಿದೆ. ನಾಲ್ಕು ವಾರಗಳ ಸರಣಿಯಲ್ಲಿ ನಾಲ್ಕು ಟೆಸ್ಟ್ ಆಡಲಿದೆ.

ಪ್ಯಾಟ್ ಕಮಿನ್ಸ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಜೋಶ್ ಹೇಜಲ್ವುಡ್ ಮತ್ತು ನೇಥನ್ ಲಯನ್ ಮುಂತಾದ ಅನುಭವಿ ಆಟಗಾರರಿಗೆ ಬಾರ್ಡರ್-ಗಾವಸ್ಕರ್ ಟ್ರೋಫಿ ಸರಣಿಯು ಕೊನೆಯ ಪ್ರವಾಸವಾಗುವ ಸಾಧ್ಯತೆಯಿದೆ. ಈ ಆಟಗಾರರಿಗೆ ಭಾರತ ನೆಲದಲ್ಲಿ ಒಮ್ಮೆಯೂ ಸರಣಿ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ, ಈ ಬಾರಿಯ ಸರಣಿಯು ಮಹತ್ವ ಪಡೆದುಕೊಳ್ಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.