ಭಾರತಕ್ಕೆ 289 ರನ್‌ಗಳ ಗೆಲುವಿನ ಗುರಿ

7

ಭಾರತಕ್ಕೆ 289 ರನ್‌ಗಳ ಗೆಲುವಿನ ಗುರಿ

Published:
Updated:

ಸಿಡ್ನಿ: ಮೊದಲ ಏಕದಿನ ಕ್ರಿಕೆಟ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತಕ್ಕೆ 289 ರನ್‌ಗಳ ಗೆಲುವಿನ ಗುರಿ ನೀಡಿದೆ. 

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 288 ರನ್‌ ಗಳಿಸಿದೆ. ಭಾರತದ ಬಿಗಿ ಬೌಲಿಂಗ್‌ ದಾಳಿಗೆ ತಕ್ಕ ಉತ್ತರ ನೀಡಿದ ಆಸ್ಟ್ರೇಲಿಯಾ ಗೌರವಾನ್ವಿತ ಮೊತ್ತವನ್ನು ಕಲೆ ಹಾಕಿದೆ. ಭಾರತ ಈ ಪಂದ್ಯವನ್ನು ಗೆಲ್ಲಲು 50 ಓವರ್‌ಗಳಲ್ಲಿ 289 ರನ್‌ ಗಳಿಸಬೇಕಿದೆ. 

ಉತ್ತಮವಾಗಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಖವಾಜಾ (59), ಶಾನ್ ಮಾರ್ಷ್‌ (54) ಹಾಗೂ ಪೀಟರ್ ಹ್ಯಾಂಡ್ಸ್‌ಕಾಬ್‌ (73) ಆಕರ್ಷಕ ಅರ್ಧ ಶತಕ ದಾಖಲಿಸಿದರು. 

ಭುವನೇಶ್ವರ್ ಕುಮಾರ್ ಮತ್ತು ಕುಲದೀಪ್‌ ಯಾದವ್‌ ತಲಾ 2 ವಿಕೆಟ್‌ ಕಬಳಿಸುವ ಮೂಲಕ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದರು. ಈ ಪಂದ್ಯದಲ್ಲಿ ಎರಡು ವಿಕೆಟ್‌ ಪಡೆಯುವ ಮೂಲಕ ಭುವನೇಶ್ವರ್ ಕುಮಾರ್ ಏಕದಿನ ಕ್ರಿಕೆಟ್‌ನಲ್ಲಿ 100 ವಿಕೆಟ್ ಪಡೆದ ಸಾಧನೆ ಮಾಡಿದರು. 

ಸ್ಕೋರ್‌: ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 288 ರನ್‌ 

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !