ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್: 24 ವರ್ಷಗಳ ನಂತರ ಆಸ್ಟ್ರೇಲಿಯಾದ ಪಾಕಿಸ್ತಾನ ಪ್ರವಾಸ

Last Updated 4 ಫೆಬ್ರುವರಿ 2022, 14:01 IST
ಅಕ್ಷರ ಗಾತ್ರ

ಕರಾಚಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡವು 24 ವರ್ಷಗಳ ನಂತರ ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿದೆ.

ಮಾರ್ಚ್‌ 3ರಿಂದ ಪಾಕಿಸ್ತಾನದಲ್ಲಿ ಮೂರು ಟೆಸ್ಟ್, ಏಕದಿನ ಮತ್ತು ಮೂರು ಟಿ20 ಪಂದ್ಯಗಳ ಸರಣಿಗಳಲ್ಲಿ ಆಸ್ಟ್ರೇಲಿಯಾ ತಂಡವು ಆಡಲಿದೆ.

ರಾವಲ್ಪಿಂಡಿ, ಕರಾಚಿ ಮತ್ತು ಲಾಹೋರ್‌ ನಗರಗಳಲ್ಲಿ ಪಂದ್ಯಗಳನ್ನು ಆಯೋಜಿಸಲಾಗುತ್ತಿದೆ. ಈ ವಿಷಯವನ್ನು ಶುಕ್ರವಾರ ಕ್ರಿಕೆಟ್ ಆಸ್ಟ್ರೇಲಿಯಾ ಖಚಿತಪಡಿಸಿದೆ.

ಮಾರ್ಚ್‌ 4 ರಿಂದ 8ರವರೆಗೆ ರಾವಲ್ಪಿಂಡಿಯಲ್ಲಿ ಮೊದಲ ಟೆಸ್ಟ್ ನಡೆಯಲಿದೆ.

‘ಕ್ರಿಕೆಟ್ ಆಸ್ಟ್ರೇಲಿಯಾದ ತೀರ್ಮಾನದಿಂದ ನಮಗೆ ಬಹಳ ಸಂತಸವಾಗಿದೆ. ಐತಿಹಾಸಿಕ ಸರಣಿಯನ್ನು ಆಯೋಜಿಸಲು ನಾವು ಉತ್ಸುಕರಾಗಿದ್ದೇವೆ. 24 ವರ್ಷಗಳ ನಂತರ ಆಸ್ಟ್ರೇಲಿಯಾ ಬಳಗವನ್ನು ಸ್ವಾಗತಿಸುತ್ತಿರುವುದು ಖುಷಿಯಾಗಿದೆ’ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮುಖ್ಯ ಕಾರ್ಯನಿರ್ವಾಹಕ ಫೈಸಲ್ ಹಸನೈನ್ ತಿಳಿಸಿದ್ದಾರೆ.

ಈಚೆಗೆ ಪಾಕಿಸ್ತಾನದಲ್ಲಿ ಆಯೋಜಿಸಲಾಗಿದ್ದ ಸರಣಿಗಳಲ್ಲಿ ಆಡಲಿದ್ದ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳು ಕೊನೆಯ ಕ್ಷಣದಲ್ಲಿ ಪ್ರವಾಸ ರದ್ದು ಮಾಡಿದ್ದವು.

2009ರಲ್ಲಿ ಲಾಹೋರ್‌ನಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಆಗಿನಿಂದಲೂ ಪಾಕ್‌ನಲ್ಲಿ ಅಂತರರಾಷ್ಟ್ರೀಯ ದ್ವೀಪಕ್ಷೀಯ ಸರಣಿಗಳನ್ನು ಆಡಲು ವಿದೇಶಿ ತಂಡಗಳು ಹಿಂದೇಟು ಹಾಕಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT