ಬುಧವಾರ, ಜುಲೈ 28, 2021
28 °C

ಕ್ರಿಕೆಟ್ ವೀಕ್ಷಕ ವಿವರಣೆಗಾರ ಬಾಪು ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ದೇಶಿ ಕ್ರಿಕೆಟ್ ಅಂಪೈರ್ ಮತ್ತು ವೀಕ್ಷಕ ವಿವರಣೆಗಾರ ಬಾಪು ಹನುಮಂತರಾವ್ (86) ಅವರು ಶುಕ್ರವಾರ ರಾತ್ರಿ ಅಮೆರಿಕದ ಶಿಕಾಗೊದಲ್ಲಿ ನಿಧನರಾದರು. ಅವರಿಗೆ ಒಬ್ಬ ಮಗ ಮತ್ತು ಮಗಳು ಇದ್ದಾರೆ.

‘ಇಂಡಸ್ಟ್ರಿಯಲ್ ಎಂಜಿನಿಯರ್ ಆಗಿದ್ದ ಅವರು ಉತ್ತಮ ಕ್ರಿಕೆಟ್ ಆಟಗಾರನೂ ಆಗಿದ್ದರು. ಅಂಪೈರಿಂಗ್ ಕೂಡ ಮಾಡಿದ್ದರು. ಬೆಂಗಳೂರಿನ ಸಿಟಿ ಕ್ರಿಕೆಟಿರ್ಸ್‌ ಮತ್ತು ಬೆಂಗಳೂರು ಡೈನಾಮೊಸ್ ತಂಡಗಳಲ್ಲಿ ಆಡಿದ್ದರು. ಆಕಾಶವಾಣಿ, ದೂರದರ್ಶನದಲ್ಲಿ ಕ್ರಿಕೆಟ್‌ ವೀಕ್ಷಕ ವಿವರಣೆಗಾರನಾಗಿ ಕಾರ್ಯನಿರ್ವಹಿಸಿದ್ದರು. ಉದ್ಯೋಗಕ್ಕಾಗಿ ಅವರು ಕಳೆದ 50 ವರ್ಷಗಳಿಗಿಂತಲೂ ಹೆಚ್ಚು ಸಮಯದಿಂದ ಅಮೆರಿಕದಲ್ಲಿ ನೆಲೆಸಿದ್ದರು‘ ಎಂದು ಬೆಂಗಳೂರಿನಲ್ಲಿರುವ ಅವರ ಸಹೋದರ ಬಾಪು ಪಾಂಡುರಂಗ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು