ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಧರ ಕ್ರಿಕೆಟ್: ಭಾರತಕ್ಕೆ ಜಯ

Published 22 ಆಗಸ್ಟ್ 2023, 16:17 IST
Last Updated 22 ಆಗಸ್ಟ್ 2023, 16:17 IST
ಅಕ್ಷರ ಗಾತ್ರ

ಬರ್ಮಿಂಗ್‌ಹ್ಯಾಮ್: ವೆಂಕಟೇಶ್ವರ್ ರಾವ್ ದುನಾ (54 ರನ್) ಅವರ ಅಮೋಘ ಅರ್ಧಶತಕದ ಬಲದಿಂದ ಭಾರತ ಪುರುಷರ ಅಂಧ ಕ್ರಿಕೆಟ್ ತಂಡವು ಇಲ್ಲಿ ಅಂತರರಾಷ್ಟ್ರೀಯ ಅಂಧರ ಕ್ರೀಡಾ ಫೆಡರೇಷನ್‌  ಕ್ರೀಡಾಕೂಟದ ಕ್ರಿಕೆಟ್‌ ಟೂರ್ನಿಯಲ್ಲಿ ಜಯಿಸಿತು.

ಮಂಗಳವಾರ ನಡೆದ ಪಂದ್ಯದಲ್ಲಿ ಭಾರತ ತಂಡವು ಏಳು ವಿಕೆಟ್‌ಗಳಿಂದ ಆತಿಥೇಯ ಇಂಗ್ಲೆಂಡ್ ವಿರುದ್ಧ ಜಯಿಸಿತು. ಇದರೊಂದಿಗೆ ಭಾರತವು ಟೂರ್ನಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಎರಡನೇ ಜಯ ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡವು 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 147 ರನ್‌ ಗಳಿಸಿತು. ಗುರಿ ಬೆನ್ನಟ್ಟಿದ ಭಾರತ ತಂಡವು ಇನಿಂಗ್ಸ್‌ನಲ್ಲಿ ಇನ್ನೂ 30 ಎಸೆತಗಳು ಬಾಕಿ ಇರುವಾಗಲೇ ಗೆಲುವು ದಾಖಲಿಸಿತು. 

ಸಂಕ್ಷಿಪ್ತ ಸ್ಕೋರು: ಇಂಗ್ಲೆಂಡ್: 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 147 (ಎಂ. ಡೀನ್ 38) ಭಾರತ: 15 ಓವರ್‌ಗಳಲ್ಲಿ  3 ವಿಕೆಟ್‌ಗಳಿಗೆ 148 (ವೆಂಕಟೇಶ್ವರ ರಾವ್ ದುನಾ 54)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT