ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಸೇರ್ಪಡೆಗೆ ಪ್ರಯತ್ನ ಮಾಡುವುದಾಗಿ ಘೋಷಿಸಿದ ಐಸಿಸಿ

Last Updated 10 ಆಗಸ್ಟ್ 2021, 14:59 IST
ಅಕ್ಷರ ಗಾತ್ರ

ದುಬೈ: 2028ರ ಲಾಸ್‌ ಏಂಜಲೀಸ್‌ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಸೇರ್ಪಡೆ ಮಾಡಲು ಪ್ರಯತ್ನಿಸುತ್ತಿರುವುದಾಗಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಮಂಗಳವಾರ ತಿಳಿಸಿದೆ.

ಒಂದೊಮ್ಮೆ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಸೇರ್ಪಡೆಗೊಂಡರೆ ಭಾರತ ತಂಡವನ್ನು ಕಳುಹಿಸಲು ನಾವು ಸಿದ್ಧ ಎಂದು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಾರ್ಯದರ್ಶಿ ಜಯ್‌ ಶಾ ಇತ್ತೀಚೆಗೆ ಹೇಳಿದ್ದರು. ಇದರ ಬೆನ್ನಲ್ಲೇ ಐಸಿಸಿ ಈ ಹೇಳಿಕೆ ನೀಡಿದೆ.

‘ಕ್ರಿಕೆಟ್‌ಗೆ ದೊಡ್ಡ ಅಭಿಮಾನಿ ಬಳಗವಿದೆ. ದಕ್ಷಿಣ ಏಷ್ಯಾದಲ್ಲಿ ಶೇ 92ರಷ್ಟು ಕ್ರಿಕೆಟ್‌ ಪ್ರಿಯರಿದ್ದಾರೆ. ಅಮೆರಿಕದಲ್ಲೂ ಕೋಟ್ಯಂತರ ಕ್ರಿಕೆಟ್‌ ಪ್ರೇಮಿಗಳಿದ್ದಾರೆ. ತಾವು ಆರಾಧಿಸುವ ಆಟಗಾರರು ಒಲಿಂಪಿಕ್ಸ್‌ ಪದಕಕ್ಕಾಗಿ ಪೈಪೋಟಿ ನಡೆಸುವುದನ್ನು ನೋಡಲು ಅವರೆಲ್ಲಾ ಕಾತರರಾಗಿದ್ದಾರೆ’ ಎಂದು ಐಸಿಸಿ ಮುಖ್ಯಸ್ಥ ಗ್ರೆಗ್‌ ಬಾರ್ಕ್ಲೆ ತಿಳಿಸಿದ್ದಾರೆ.

2022ರಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುವ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಮಹಿಳಾ ಕ್ರಿಕೆಟ್‌ ಅನ್ನು ಸೇರಿಸಲು ಈಗಾಗಲೇ ನಿರ್ಧರಿಸಲಾಗಿದೆ.

1900ರಲ್ಲಿ ನಡೆದಿದ್ದ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಕೂಡ ಇತ್ತು. ಆಗ ನಡೆದಿದ್ದ ಎರಡು ದಿನಗಳ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡವು ಫ್ರಾನ್ಸ್‌ ವಿರುದ್ಧ ಜಯಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT