ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನದ ರಕ್ಷಣೆಗಾಗಿ ಸಮಾವೇಶ ನಾಳೆ

ಕಲಬುರ್ಗಿ ಗ್ರಾಮೀಣ ಕ್ಷೇತ್ರಕ್ಕೆ ಏ.23ರಂದು ನಾಮಪತ್ರ: ಮಾರುತಿ ಮಾನ್ಪಡೆ
Last Updated 20 ಏಪ್ರಿಲ್ 2018, 8:18 IST
ಅಕ್ಷರ ಗಾತ್ರ

ಕಲಬುರ್ಗಿ: ‘ಸಂವಿಧಾನದ ರಕ್ಷಣೆಗಾಗಿ ಹಾಗೂ ಐಕ್ಯ ಭಾರತಕ್ಕಾಗಿ ಏ.21ರಂದು ಶಹಬಾದನಲ್ಲಿ ಬೃಹತ್ ಸಮಾವೇಶ ಮತ್ತು ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಮಾರುತಿ ಮಾನ್ಪಡೆ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ  ದಲಿತರು, ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದು, ರಕ್ಷಣೆ ಇಲ್ಲದಂತಾಗಿದೆ. ಸಂವಿಧಾನ ಬದಲಾವಣೆ ಬಗ್ಗೆ ಜನಪ್ರತಿನಿಧಿಗಳು ಹೇಳಿಕೆ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರ ದಲಿತ, ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಿದೆ’ ಎಂದು ಆರೋಪಿಸಿದರು.

‘ತೊಗರಿ ಬೆಳೆಗಾರರ ಸಮಸ್ಯೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಯಾವುದೇ ರೀತಿಯಲ್ಲೂ ಸ್ಪಂದಿಸುತ್ತಿಲ್ಲ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಕೂಡ ಸಮರ್ಪಕ ಆಡಳಿತ ನೀಡುವಲ್ಲಿ ವಿಫಲವಾಗಿದೆ’ ಎಂದು ದೂರಿದರು.

‘ಸಿಪಿಐಎಂ ಪಕ್ಷದಿಂದ ಕಲಬುರ್ಗಿ ಗ್ರಾಮೀಣ ಕ್ಷೇತ್ರಕ್ಕೆ ಸ್ಪರ್ಧಿಸುತ್ತಿದ್ದು, ಗೆಲ್ಲುವ ನಿರೀಕ್ಷೆ ಇದೆ. ಜನರು ನನ್ನನ್ನು ಬೆಂಬಲಿಸುತ್ತಿದ್ದಾರೆ. ಏ.23ರಂದು ನಾಮಪತ್ರ ಸಲ್ಲಿಸುತ್ತೇನೆ. ಈಗಾಗಲೇ ಪ್ರಚಾರ ಕೈಗೊಂಡಿದ್ದೇನೆ’ ಎಂದು ಹೇಳಿದರು.

ಶರಣಬಸಪ್ಪ ಮಾತನಾಡಿ, ‘ಹೋರಾಟಗಳ ಮೂಲಕ ಸಮಾಜದಲ್ಲಿನ ಸಮಸ್ಯೆಗಳನ್ನು ಬಗೆಹರಿಸುವ, ಜನರ ಕಷ್ಟಗಳಿಗೆ ಸ್ಪಂದಿಸುವ ಹಾಗೂ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮಾರುತಿ ಮಾನ್ಪಡೆ ಅವರಂತಹ ನಾಯಕರನ್ನು ಜನರು ಬೆಂಬಲಿಸಬೇಕು’ ಎಂದು ಹೇಳಿದರು.

ಶಾಮರಾವ, ಪಾಂಡುರಂಗ, ಸುಧಾಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT