ಬುಧವಾರ, ಮೇ 25, 2022
29 °C

ಆಟವಾಡುತ್ತಲೇ ಕುಸಿದು ಬಿದ್ದು ಮೃತಪಟ್ಟ ಕ್ರಿಕೆಟಿಗ: ವಿಡಿಯೊ ವೈರಲ್

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

Agencies

ಬೆಂಗಳೂರು: ಮಹಾರಾಷ್ಟ್ರದ ಪುಣೆಯಲ್ಲಿ ಬುಧವಾರ ನಡೆಯುತ್ತಿದ್ದ ಸ್ಥಳೀಯ ಟೂರ್ನಮೆಂಟ್ ಕ್ರಿಕೆಟ್ ಸಂದರ್ಭದಲ್ಲಿ ಆಟಗಾರನೊಬ್ಬ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಪುಣೆಯ ಜುನ್ನಾರ್ ತೆಸಿಲ್‌ನಲ್ಲಿ ಆಯೋಜಿಸಲಾಗಿದ್ದ ಸ್ಥಳೀಯ ಟೂರ್ನಮೆಂಟ್ ಒಂದರಲ್ಲಿ ಈ ದುರ್ಘಟನೆ ಸಂಭವಿಸಿದೆ.

ಮೃತ ಕ್ರಿಕೆಟಿಗನನ್ನು ಬಾಬು ನಾಲ್ವಡೆ (47 ವ) ಎಂದು ಗುರುತಿಸಲಾಗಿದೆ. ಕ್ರಿಕೆಟ್ ಪಂದ್ಯಾಟದ ವೇಳೆ ಬಾಬು ಇದ್ದಕ್ಕಿದ್ದಂತೆ ಕುಸಿದು ಬೀಳುವ ದೃಶ್ಯಗಳು ವಿಡಿಯೊದಲ್ಲಿ ದಾಖಲಾಗಿದ್ದು, ವೈರಲ್ ಆಗಿವೆ.

ತಕ್ಷಣ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ನಾರಾಯಣ್‌ಗಾವ್ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮರಣೋತ್ತರ ಪರೀಕ್ಷೆಯಲ್ಲಿ ಕ್ರಿಕೆಟಿಗ ಬಾಬು ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು