ಸೋಮವಾರ, ಡಿಸೆಂಬರ್ 5, 2022
19 °C

ಮಳೆಯಿಂದ ಭಾರತ–ನ್ಯೂಜಿಲೆಂಡ್‌ ಪಂದ್ಯ ರದ್ದು

ಪಿಟಿಐ Updated:

ಅಕ್ಷರ ಗಾತ್ರ : | |

ವೆಲ್ಲಿಂಗ್ಟನ್‌: ಭಾರತ–ನ್ಯೂಜಿಲೆಂಡ್‌ ನಡುವಿನ 3 ಪಂದ್ಯಗಳ ಟಿ–20 ಸರಣಿಯ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿದೆ.

ಶುಕ್ರವಾರ ಸತತವಾಗಿ ತುಂತುರು ಮಳೆ ಸುರಿದ ಕಾರಣ ಟಾಸ್‌ ಕೂಡ ನಡೆಯದೇ ಪಂದ್ಯ ರದ್ದಾಯಿತು. ಪಂದ್ಯಕ್ಕಾಗಿ ಕಾತುರತೆಯಿಂದ ಕಾದು ಕುಳಿತಿದ್ದ ಅಭಿಮಾನಿಗಳಿಗೆ ನಿರಾಸೆ ಉಂಟಾಯಿತು.

ನ್ಯೂಜಿಲೆಂಡ್‌ ಪ್ರವಾಸದ ಭಾಗವಾಗಿ ಭಾರತವು 3 ಟಿ–20 ಹಾಗೂ ಹಲವು ಏಕದಿನ ಪಂದ್ಯಗಳನ್ನು ಆಡಲಿದೆ. ಎರಡನೇ ಟಿ–20 ಪಂದ್ಯ ಭಾನುವಾರ ನಡೆಯಲಿದೆ. ಉಭಯ ತಂಡಗಳು ಆಸ್ಟ್ರೇಲಿಯದಲ್ಲಿ ಇತ್ತೀಚೆಗೆ ನಡೆದ ಟಿ–20 ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಸರಣಿಯಿಂದ ಹೊರಬಿದ್ದಿದ್ದವು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು