ಭಾನುವಾರ, ಜುಲೈ 3, 2022
28 °C

ಕೋವಿಡ್: ಪ್ರೇಕ್ಷಕರಿಲ್ಲದೆ ನಡೆಯಲಿದೆ ಭಾರತ–ದಕ್ಷಿಣ ಆಫ್ರಿಕಾ ಕ್ರಿಕೆಟ್ ಸರಣಿ

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

ಜೋಹಾನ್ಸ್‌ಬರ್ಗ್: ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್ ಭೀತಿ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ಮತ್ತು ಭಾರತದ ನಡುವಿನ ಕ್ರಿಕೆಟ್ ಸರಣಿಗಳನ್ನು ಪ್ರೇಕ್ಷರಿಲ್ಲದೆ ನಡೆಸಲು ಕ್ರಿಕೆಟ್ ದಕ್ಷಿಣ ಆಫ್ರಿಕಾ(ಸಿಎಸ್‌ಎ) ನಿರ್ಧರಿಸಿದೆ.

ಭಾನುವಾರ ಸೆಂಚುರಿಯನ್‌ನಲ್ಲಿ ಮೂರು ಟೆಸ್ಟ್‌ ಪಂದ್ಯಗಳ ಸರಣಿಯ ಮೊದಲ ಪಂದ್ಯ ಆರಂಭವಾಗುತ್ತಿದ್ದು, ಜನವರಿ 17ರಿಂದ ಮೂರು ಏಕದಿನ ಪಂದ್ಯಗಳ ಸರಣಿ ಆರಂಭವಾಗಲಿದೆ.

ಬಿಸಿಸಿಐ ಜೊತೆಗಿನ ಜಂಟಿ ಸಭೆಯಲ್ಲಿ ಮುಚ್ಚಿದ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ನಡೆಸಲು ತೀರ್ಮಾನಿಸಲಾಯಿತು ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ತಿಳಿಸಿದೆ.

‘ಕೋವಿಡ್ ಅಪಾಯದ ದೃಷ್ಟಿಯಿಂದ ಪ್ರವಾಸದ ಮೇಲೆ ಬೀಳಬಹುದಾದ ಯಾವುದೇ ಪರಿಣಾಮವನ್ನು ತಪ್ಪಿಸಲು ಮತ್ತು ಅಪಾಯ-ಮುಕ್ತ ಬಯೊ ಬಬಲ್ ಪರಿಸರವನ್ನು ಕಾಪಾಡಿಕೊಳ್ಳಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ’ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕ್ರೀಡೆಯ ಹಿತದೃಷ್ಟಿ ಮತ್ತು ಆಟಗಾರರ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಮಾಡಲಾಗಿದೆ ಎಂದು ಮಂಡಳಿ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು