ಗುರುವಾರ , ಮಾರ್ಚ್ 23, 2023
28 °C

ಕ್ರಿಕೆಟಿಗ ಡೇವಿಡ್ ಕೆಪೆಲ್ ನಿಧನ

ಎಪಿ Updated:

ಅಕ್ಷರ ಗಾತ್ರ : | |

Prajavani

ನಾರ್ತಾಂಪ್ಟನ್: ಇಂಗ್ಲೆಂಡ್‌ನ ಮಾಜಿ ಕ್ರಿಕೆಟಿಗ ಡೇವಿಡ್ ಕ್ಯಾಪೆಲ್ (57) ದೀರ್ಘಕಾಲದ ಅನಾರೋಗ್ಯದಿಂದಾಗಿ ಬುಧವಾರ ನಿಧನರಾದರು.

ಆಲ್‌ರೌಂಡರ್ ಡೇವಿಡ್ ಅವರು ಇಂಗ್ಲೆಂಡ್ ತಂಡದಲ್ಲಿ 15 ಟೆಸ್ಟ್ ಮತ್ತು 23 ಅಂತರರಾಷ್ಟ್ರೀಯ ಏಕದಿನ ಪಂದ್ಯಗಳನ್ನು ಆಡಿದ್ದರು. 1987 ರಿಂದ 1990ರ ಅವಧಿಯಲ್ಲಿ ಅವರು ಇಂಗ್ಲೆಂಡ್ ತಂಡವನ್ನು ಪ್ರತಿನಿಧಿಸಿದ್ದರು. ಇಂಗ್ಲಿಷ್ ಕೌಂಟಿಯಲ್ಲಿ ಸತತ 32 ವರ್ಷಗಳವರೆಗೆ ನಾರ್ತಾಂಪ್ಟನ್‌ಶೈರ್‌ ತಂಡದಲ್ಲಿ ಆಟಗಾರನಾಗಿ ಮತ್ತು ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. ಅವರು ಒಟ್ಟು 270 ಪ್ರಥಮದರ್ಜೆ ಪಂದ್ಯಗಳನ್ನಾಡಿದ್ದರು.

2018ರಲ್ಲಿ ಅವರು ಮಿದುಳಿನ ಗಡ್ಡೆಯ ಸಮಸ್ಯೆಯಿಂದ ಬಳಲಿದ್ದರು. ಅವರಿಗೆ ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು