ಮಂಗಳವಾರ, ಡಿಸೆಂಬರ್ 7, 2021
20 °C

ಅಪ್ಪನಾದ ದಿನೇಶ್ ಕಾರ್ತಿಕ್; ಅವಳಿ ಮಕ್ಕಳಿಗೆ ಜನ್ಮ ನೀಡಿದ ದೀಪಿಕಾ ಪಳ್ಳಿಕಲ್

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತೀಯ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಅವರ ಪತ್ನಿ, ಸ್ಕ್ವಾಷ್ ಆಟಗಾರ್ತಿ ಪಳ್ಳಿಕಲ್, ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಅವಳಿ ಗಂಡು ಮಕ್ಕಳಿಗೆ ತಂದೆಯಾದ ಶುಭ ಸುದ್ದಿಯನ್ನು ಸ್ವತಃ ದಿನೇಶ್ ಕಾರ್ತಿಕ್ ಅವರೇ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಮಾನಿಗಳೊಂದಿಗೆ ಹಂಚಿದ್ದಾರೆ.

ಇದನ್ನೂ ಓದಿ: 

 

 

 

ಈ ಸಂತಸದ ಕ್ಷಣದಲ್ಲಿ ಮಕ್ಕಳ ಹೆಸರುಗಳನ್ನು ಬಹಿರಂಗಪಡಿಸಿದ್ದಾರೆ. ಕಬೀರ್ ಪಳ್ಳಿಕಲ್ ಕಾರ್ತಿಕ್ ಹಾಗೂ ಝಿಯಾನ್ ಪಳ್ಳಿಕಲ್ ಕಾರ್ತಿಕ್ ಎಂದು ನಾಮಕರಣ ಮಾಡಲಾಗಿದೆ.

ದೀಪಿಕಾ ಪಳ್ಳಿಕಲ್ ಸಹ ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ.

ಇತ್ತೀಚೆಗಷ್ಟೇ ಅಂತ್ಯಗೊಂಡ ಐಪಿಎಲ್ ಟೂರ್ನಿಯಲ್ಲಿ ದಿನೇಶ್ ಕಾರ್ತಿಕ್ ಪ್ರತಿನಿಧಿಸಿದ್ದ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ರನ್ನರ್-ಅಪ್ ಪ್ರಶಸ್ತಿ ಜಯಿಸಿತ್ತು. ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 27 ರನ್ ಅಂತರದ ಸೋಲಿಗೆ ಶರಣಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು