ಭಾನುವಾರ, ನವೆಂಬರ್ 29, 2020
25 °C

ಮಯಂಕ್‌ಗೊಂದು ರೋಹಿತ್‌ಗೊಂದು ನಿಯಮ ಏಕೆ: ಓಜಾ ಪ್ರಶ್ನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಗಾಯಗೊಂಡಿರುವ ರೋಹಿತ್ ಶರ್ಮಾ ಅವರನ್ನು ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳುವ ಭಾರತ ತಂಡಕ್ಕೆ ಸೇರ್ಪಡೆ ಮಾಡಿಕೊಂಡಿಲ್ಲ. ಆದರೆ ಮಯಂಕ್ ಅಗರವಾಲ್ ಕೂಡ ಗಾಯಗೊಂಡಿದ್ದು, ಅವರನ್ನೇಕೆ ಮೂರು ಮಾದರಿಗಳಿಗೂ ಆಯ್ಕೆ ಮಾಡಲಾಗಿದೆ ಎಂದು ಮಾಜಿ ಕ್ರಿಕೆಟಿಗ ಪ್ರಗ್ಯಾನ್ ಓಜಾ ಪ್ರಶ್ನಿಸಿದ್ದಾರೆ.

ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಲಿರುವ ಭಾರತದ ಮೂರು ಮಾದರಿಯ ತಂಡಗಳಲ್ಲಿ ಶರ್ಮಾ ಸ್ಥಾನ ಪಡೆದಿಲ್ಲ. ಅವರು ಮತ್ತು ಇಶಾಂತ್ ಶರ್ಮಾ ಗಾಯಗೊಂಡಿರುವ ಕಾರಣ ನಿಯಮದ ಪ್ರಕಾರ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲವೆಂದು ಬಿಸಿಸಿಐ ಮೂಲಗಳು ಸೋಮವಾರ ಹೇಳಿದ್ದವು. ಕಿಂಗ್ಸ್ ಇಲೆವನ್ ಪಂಜಾಬ್ ತಂಡದಲ್ಲಿ ಆಡುತ್ತಿರುವ ಮಯಂಕ್ ಕೂಡ ಗಾಯದ ಸಮಸ್ಯೆಯಿಂದಾಗಿ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿಲ್ಲ. ಆದರೆ, ಅವರನ್ನು ಮೂರೂ ತಂಡಗಳಿಗೆ ಆಯ್ಕೆ ಮಾಡಲಾಗಿದೆ. ‌

’ಆಯ್ಕೆ ಸಮಿತಿಯ ಈ ನಡೆಯು ಅರ್ಥವಾಗುತ್ತಿಲ್ಲ. ನಿಯಮ ಎಲ್ಲರಿಗೂ ಒಂದೇ ಆಗಬೇಕಲ್ಲವೇ. ಇದಲ್ಲದೇ ಕೆ.ಎಲ್. ರಾಹುಲ್ ಅವರಿಗೆ ಉಪನಾಯಕನ ಪಟ್ಟ ನೀಡಲಾಗಿದೆ. ಪ್ರವಾಸದ ಆರಂಭಕ್ಕೆ ಮುನ್ನ ರೋಹಿತ್ ಶರ್ಮಾ ತಮ್ಮ ಫಿಟ್‌ನೆಸ್‌ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ತಂಡಕ್ಕೆ ಮರಳಿದರೆ ಮುಂದೇನು ಮಾಡ್ತಾರೆ. ರೋಹಿತ್‌ಗೆ ಉಪನಾಯಕನ ಸ್ಥಾನ ಕೊಡುವುದಿಲ್ಲವೇ?‘ ಎಂದು ಸ್ಪೋರ್ಟ್ಸ್ ಟುಡೆ ವೆಬ್‌ಸೈಟ್‌ನಲ್ಲಿ  ಓಜಾ ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು