ದೆಹಲಿ: ಇಂದು ಬೆಳಗ್ಗೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಕ್ರಿಕೆಟರ್ ರಿಷಭ್ ಪಂತ್ ಗಾಯಗೊಂಡಿದ್ದಾರೆ. ಅಪಘಾತ ಸನ್ನಿವಶ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೊ ಬೆಚ್ಚಿಬೀಳಿಸುವಂತಿದೆ.
ಘಟನೆಯಲ್ಲಿ 25 ವರ್ಷದ ಪಂತ್ ಅವರತಲೆ ಮತ್ತು ಕಾಲಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆನ್ನಿಗೆ ತೀವ್ರ ಪೆಟ್ಟಾಗಿದೆ ಎನ್ನಲಾಗಿದೆ.
ಪಂತ್ ಅವರ ಬಿಎಂಡಬ್ಳ್ಲು ಕಾರು ರಸ್ತೆ ವಿಭಜಕಕ್ಕೆಡಿಕ್ಕಿಯಾಗಿದೆ. ಅಪಘಾತದ ಬಳಿಕ ತೆಗೆಯಲಾದ ಚಿತ್ರದಲ್ಲಿ ಪಂತ್ ಅವರಿದ್ದ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿರುವ ಸ್ಥಿತಿಯಲ್ಲಿದೆ. ಪಂತ್ ಅವರ ತಲೆಗೆ ಬ್ಯಾಂಡೇಜ್ ಹಾಕಲಾದ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುತ್ತಿದೆ.
ಇದನ್ನೂ ಓದಿ:ಕಾರು ಅಪಘಾತದಲ್ಲಿ ರಿಷಭ್ ಪಂತ್ಗೆ ಗಾಯ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.