ಮಂಗಳವಾರ, ಆಗಸ್ಟ್ 3, 2021
22 °C

ಹಿರಿಯ ಕ್ರಿಕೆಟಿಗ ಶುಕ್ಲಾ ಪತ್ನಿಗೆ ಕೊರೊನಾ ವೈರಸ್‌ ಸೋಂಕು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಭಾರತದ ಹಿರಿಯ ಕ್ರಿಕೆಟಿಗ ಲಕ್ಷ್ಮಿ ರತನ್‌ ಶುಕ್ಲಾ ಅವರ ಪತ್ನಿ ಸ್ಮಿತಾ ಸನ್ಯಾಲ್‌ ಶುಕ್ಲಾ ಅವರಿಗೆ ಕೋವಿಡ್‌–19 ಇರುವುದು ದೃಢಪಟ್ಟಿದೆ.

ಸ್ಮಿತಾ ಅವರು ಪಶ್ಚಿಮ ಬಂಗಾಳದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸೋಂಕು ತಗುಲಿರುವುದು ಶುಕ್ರವಾರ ಗೊತ್ತಾಗಿದೆ.

‘ಜ್ವರದ ಲಕ್ಷಣ ಕಾಣಿಸಿಕೊಂಡಿದ್ದರಿಂದ ನನ್ನ ಪತ್ನಿ ಸ್ಮಿತಾ, ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡಿದ್ದರು. ಅವರಿಗೆ ಸೋಂಕು ತಗುಲಿರುವುದು ವರದಿಯಲ್ಲಿ ಖಾತರಿಯಾಗಿದೆ. ನನ್ನ ಇಬ್ಬರು ಗಂಡು ಮಕ್ಕಳು, ವಯಸ್ಸಾದ ಅಪ್ಪ ಸೇರಿದಂತೆ ಮನೆಯವರೆಲ್ಲಾ ಈಗ ಸ್ವಯಂ ಪ್ರತ್ಯೇಕವಾಸದ ಮೊರೆ ಹೋಗಿದ್ದೇವೆ. ನಾವು ಕೂಡ ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದೇವೆ’ ಎಂದು ಶುಕ್ಲಾ ಅವರು ಶನಿವಾರ ತಿಳಿಸಿದ್ದಾರೆ.

39 ವರ್ಷ ವಯಸ್ಸಿನ ಶುಕ್ಲಾ, ಪಶ್ಚಿಮ ಬಂಗಾಳ ಸರ್ಕಾರದ ಕ್ರೀಡಾ ಸಚಿವರೂ ಆಗಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು