ಭಾನುವಾರ, ಮಾರ್ಚ್ 7, 2021
32 °C

ಕ್ರಿಕೆಟರ್‌ ಹಾರ್ದಿಕ್‌ ಪಾಂಡ್ಯ ತಂದೆ ಹೃದಯಾಘಾತದಿಂದ ನಿಧನ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಬರೋಡ: ಕ್ರಿಕೆಟರ್‌ಗಳಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರ ತಂದೆ ಹಿಮಾಂಶು ಪಾಂಡ್ಯ ಅವರು ಹೃದಯಾಘಾತದಿಂದ ಶನಿವಾರ ಕೊನೆಯುಸಿರೆಳೆದಿದ್ದಾರೆ.

ಈ ಬಗ್ಗೆ ಸಂತಾಪ ಸೂಚಿಸಿರುವ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ,'ಹಾರ್ದಿಕ್‌ ಹಾಗೂ ಕೃನಾಲ್‌ ತಂದೆ ಅವರ ಸಾವಿನ ಸುದ್ದಿ ಕೇಳಿ ನೋವಾಯಿತು. ಅವರೊಂದಿಗೆ ಹಲವು ಸಾರಿ ಮಾತನಾಡಿದ್ದೆ. ಅವರು ಜೀವನೋತ್ಸಾಹ ತುಂಬಿದ ವ್ಯಕ್ತಿತ್ವ ಹೊಂದಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ' ಎಂದು ಹೇಳಿದ್ದಾರೆ.

 

ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಹಾರ್ದಿಕ್ ಪಾಂಡ್ಯ, ಟಾಪ್ 50ರ ಬ್ಯಾಟ್ಸ್‌ಮನ್‌ಗಳ ಪಟ್ಟಿಗೆ ಸೇರಿದ್ದಾರೆ.

 

ಸೈಯದ್ ಮುಷ್ತಾಕ್ ಪಂದ್ಯಾವಳಿಯಲ್ಲಿ ಆಡುತ್ತಿರುವ ಕೃನಾಲ್ ಪಾಂಡ್ಯ ಇದುವರೆಗೆ ಮೂರು ಪಂದ್ಯಗಳನ್ನು ಆಡಿದ್ದು, ನಾಲ್ಕು ವಿಕೆಟ್ ಗಳಿಸಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು