ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತಾವೇಕೆ ನೈಜ ಫಿನಿಶರ್ ಎಂಬುದನ್ನು ಮಗದೊಮ್ಮೆ ಸಾಬೀತು ಮಾಡಿದ್ದಾರೆ.

ಕೊನೆಯ ಓವರ್‌ನಲ್ಲಿ ಧೋನಿ ಬ್ಯಾಟಿಂಗ್ ವೈಭವದ ನೆರವಿನಿಂದ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ಗುರುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮೂರು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ.

ಇದನ್ನೂ ಓದಿ:IPL 2022 | 'ಕೊನೇ ಎಸೆತ'ದಲ್ಲಿ ಹೆಚ್ಚು ಜಯ: ದಾಖಲೆ ಬರೆದ ಚೆನ್ನೈ ಸೂಪರ್ ಕಿಂಗ್ಸ್

ಕೊನೆಯ ನಾಲ್ಕು ಎಸೆತಗಳಲ್ಲಿ ಚೆನ್ನೈ ಗೆಲುವಿಗೆ 16 ರನ್ ಬೇಕಿತ್ತು. ಈ ಕ್ಷಣದಲ್ಲಿ ಅಬ್ಬರಿಸಿದ ಧೋನಿ, ಸಿಕ್ಸರ್ ಹಾಗೂ ಬೌಂಡರಿ ಬಾರಿಸುವ ಮೂಲಕ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು.

ಪಂದ್ಯದ ಬಳಿಕ ಆಟಗಾರರು ಪರಸ್ಪರ ಹಸ್ತಲಾಘವ ಮಾಡುವ ಸಂದರ್ಭದಲ್ಲಿ ಸಿಎಸ್‌ಕೆ ನಾಯಕ ರವೀಂದ್ರ ಜಡೇಜ ಅವರು ಕ್ಯಾಪ್ ತೆಗೆದು ಧೋನಿ ಮುಂದೆ ತಲೆ ಬಾಗಿ ನಮಸ್ಕರಿಸಿದರು. ಬಳಿಕ ತಬ್ಬಿಕೊಂಡರು.

ಇದು ಧೋನಿ ಮೇಲೆ ಜಡೇಜ ಅವರಿಗೆ ಇರುವ ಗೌರವ ಹಾಗೂ ಅಭಿಮಾನವನ್ನು ತೋರಿಸುತ್ತದೆ. ಪ್ರಸ್ತುತ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಪಂದ್ಯದಲ್ಲಿ ಸಿಎಸ್‌ಕೆ ಗೆಲುವು ದಾಖಲಿಸಲಿದೆ ಎಂದು ಯಾರೂ ಅಂದುಕೊಂಡಿರಲಿಲ್ಲ. ಆದರೆ 40 ವರ್ಷದ ಧೋನಿ, ಮಗದೊಮ್ಮೆ ಚೆನ್ನೈ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲಾರ್ಡ್ ಕಾಲಿಗೆ ಬಿದ್ದ ಬ್ರಾವೊ...
ಪಂದ್ಯಕ್ಕೂ ಮುನ್ನ ಡ್ವೇನ್ ಬ್ರಾವೊ ಅವರು ಕೀರನ್ ಪೊಲಾರ್ಡ್ ಕಾಲಿಗೆ ಬಿದ್ದು ನಮಸ್ಕರಿಸಿರುವ ಘಟನೆ ನಡೆದಿದೆ. ಬ್ರಾವೊ ಹಾಗೂ ಪೊಲಾರ್ಡ್ ಉತ್ತಮ ಗೆಳೆತನವನ್ನು ಕಾಪಾಡಿಕೊಂಡಿದ್ದಾರೆ. ಈ ಪಂದ್ಯಕ್ಕೂ ಮುನ್ನ ಪೊಲಾರ್ಡ್, ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.