ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

CWG T-20: ಇಂಗ್ಲೆಂಡ್‌ ಸೋಲಿಸಿ ಫೈನಲ್‌ ಪ್ರವೇಶಿಸಿದ ಭಾರತ

Last Updated 6 ಆಗಸ್ಟ್ 2022, 13:25 IST
ಅಕ್ಷರ ಗಾತ್ರ

ಬರ್ಮಿಂಗ್‌ಹ್ಯಾಮ್‌:ಕಾಮನ್‌ವೆಲ್ತ್ ಗೇಮ್ಸ್ 2022ರ ಮಹಿಳಾ ಕ್ರಿಕೆಟ್‌ನ ಸೆಮಿಫೈನಲ್‌ನಲ್ಲಿ ಭಾರತ ತಂಡ ಇಂಗ್ಲೆಂಡ್‌ ವಿರುದ್ಧ ರೋಚಕ ಜಯ ದಾಖಲಿಸಿ ಫೈನಲ್‌ ಪ್ರವೇಶಿಸಿದೆ.

ತೀವ್ರ ಹಣಾಹಣಿಯ ಈ ಪಂದ್ಯದಲ್ಲಿ ಭಾರತ ತಂಡ 4 ರನ್‌ಗಳ ರೋಚಕ ಗೆಲುವು ಸಾಧಿಸಿತು. ಮೊದಲ ಬ್ಯಾಟ್‌ ಮಾಡಿದ ಭಾರತ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 164 ರನ್‌ ದಾಖಲಿಸಿತ್ತು.

ಗೆಲುವಿನ ಗುರಿ ಬೆನ್ನತ್ತಿದ ಇಂಗ್ಲೆಂಡ್‌ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 160 ರನ್‌ ಮಾತ್ರ ದಾಖಲಿಸಲು ಸಾಧ್ಯವಾಯಿತು.

ಭಾರತದ ಸ್ಮೃತಿ ಮಂದಾನ 61ರನ್‌ ಹೊಡೆದರು, ಇಂಗ್ಲೆಂಡ್‌ ಪರ ನ್ಯಾಟ 41 ರನ್‌ಗಳಿಸಿದರು. ಈ ಕ್ರೀಡಾಕೂಟದಲ್ಲಿ ಭಾರತಕ್ಕೆ ಪದಕ ಖಚಿತವಾದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT