ಇಂದೋರ್: ಇಲ್ಲಿನ ಹೋಳ್ಕರ್ ಮೈದಾನದಲ್ಲಿ ಆರಂಭವಾಗಿರುವ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಬ್ಯಾಟರ್ ಡ್ಯಾರಿಲ್ ಮಿಚೆಲ್ ತಮ್ಮ ಅಮೋಘ ಲಯವನ್ನು ಮುಂದುವರೆಸಿದ್ದಾರೆ. ಇಂದಿನ ಪಂದ್ಯದ ಮೂಲಕ ಭಾರತ ತಂಡದ ವಿರುದ್ಧ ಏಕದಿನ ಕ್ರಿಕೆಟ್ನಲ್ಲಿ ವಿಶ್ವದ ಯಾವುದೇ ಬ್ಯಾಟರ್ ಮಾಡದ ದಾಖಲೆಯೊಂದನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ.

ಮೊದಲ ಏಕದಿನ ಪಂದ್ಯದಲ್ಲಿ 84 ರನ್ ಸಿಡಿಸಿದ್ದ ಡ್ಯಾರಿಲ್ ಮಿಚೆಲ್ ಅವರು ಎರಡನೇ ಪಂದ್ಯದಲ್ಲಿ ಅಜೇಯ 131 ರನ್ ಗಳಿಸುವ ಮೂಲಕ ಪಂದ್ಯವನ್ನು ಗೆಲ್ಲಿಸಿದ್ದರು. ಇಂದು ನಡೆಯುತ್ತಿರುವ ಅಂತಿಮ ಪಂದ್ಯದಲ್ಲಿ ಕೂಡ ಅವರು 137 ರನ್ ಗಳಿಸಿದ್ದಾರೆ. ಆ ಮೂಲಕ ಮೂರೂ ಪಂದ್ಯಗಳಲ್ಲಿ 50ಕ್ಕಿಂತ ಅಧಿಕ ರನ್ ಕಲೆಹಾಕಿದ್ದಾರೆ.

ಇದಕ್ಕೂ ಮೊದಲು 2023ರಲ್ಲಿ ಭಾರತ ಪ್ರವಾಸ ಕೈಗೊಂಡಾಗ ನ್ಯೂಜಿಲೆಂಡ್ ತಂಡ 5 ಪಂದ್ಯಗಳ ಏಕದಿನ ಸರಣಿ ಆಡಿತ್ತು. ಆ ಸರಣಿಯ ಕೊನೆಯ ಎರಡು ಪಂದ್ಯಗಳಲ್ಲಿ ಮಿಚೆಲ್ ಶತಕ ಸಿಡಿಸಿ ಮಿಂಚಿದ್ದರು. ಧರ್ಮಶಾಲಾದಲ್ಲಿ 130 ಹಾಗೂ ಮುಂಬೈನಲ್ಲಿ ನಡೆದ ಪಂದ್ಯದಲ್ಲಿ 134 ರನ್ ಸಿಡಿಸಿದ್ದರು. ಆ ಮೂಲಕ ಭಾರತದ ನೆಲದಲ್ಲಿ ಟೀಂ ಇಂಡಿಯಾ ವಿರುದ್ಧ ಸತತ ಐದು ಪಂದ್ಯಗಳಲ್ಲಿ 50ಕ್ಕೂ ಅಧಿಕ ರನ್ ಸಿಡಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ಸಾಧನೆ ಮಾಡಿದರು.

ಭಾರತದ ನೆಲದಲ್ಲಿ ಭಾರತದ ವಿರುದ್ಧ ಕೊನೆಯ 5 ಏಕದಿನ ಪಂದ್ಯಗಳಲ್ಲಿ ಮಿಚೆಲ್ ಬ್ಯಾಟಿಂಗ್

130 ರನ್ ಧರ್ಮಶಾಲ, 2023

134 ರನ್ ಮುಂಬೈ, 2023

84 ರನ್ ವಡೋದರ, 2026

131 ರನ್ ರಾಜ್ಕೋಟ್, 2026

137 ರನ್ ಇಂದೋರ್, 2026 (ಇಂದು)

ಆ ಮೂಲಕ ಭಾರತದ ನೆಲದಲ್ಲಿ ಭಾರತ ತಂಡದ ವಿರುದ್ಧ ಸತತ 5 ಪಂದ್ಯಗಳಲ್ಲಿ 50ಕ್ಕೂ ಅಧಿಕ ರನ್ ಸಿಡಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ಸಾಧನೆ ಮಾಡಿದರು. ಇದಕ್ಕೂ ಮೊದಲು ಸತತ 4 ಪಂದ್ಯಗಳಲ್ಲಿ 50ಕ್ಕೂ ಅಧಿಕ ರನ್ ಕಲೆಹಾಕಿದ್ದ ಕ್ರಿಸ್ ಗೇಲ್, ಡೇಮಿಯನ್ ಮಾರ್ಟಿನ್, ಅಂಡ್ರ್ಯೂ ಸೈಮಂಡ್ಸ್ ಹಾಗೂ ಎಬಿ ಡಿವಿಲಿಯರ್ಸ್ ಅವರ ಹೆಸರಿನಲ್ಲಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.