ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಇತಿಹಾಸದಲ್ಲೇ 5,500ಕ್ಕೂ ಹೆಚ್ಚು ರನ್ ಗಳಿಸಿದ ಐದನೇ ಬ್ಯಾಟರ್ ಎಂಬ ಕೀರ್ತಿಗೆ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಭಾಜನರಾಗಿದ್ದಾರೆ.
ಐಪಿಎಲ್ 15ನೇ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ವಾರ್ನರ್, ಭಾನುವಾರ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ನೂತನ ಮೈಲಿಗಲ್ಲು ಸ್ಥಾಪಿಸಿದರು. ಅಲ್ಲದೆ ವೇಗದಲ್ಲಿ 5,500 ರನ್ (152 ಇನ್ನಿಂಗ್ಸ್) ಗಳಿಸಿದ ಹಿರಿಮೆಗೆ ಭಾಜನರಾಗಿದ್ದಾರೆ.
ಈ ಮೂಲಕ ವಿರಾಟ್ ಕೊಹ್ಲಿ, ಶಿಖರ್ ಧವನ್, ರೋಹಿತ್ ಶರ್ಮಾ ಹಾಗೂ ಸುರೇಶ್ ರೈನಾ ಸಾಲಿಗೆ ಸೇರ್ಪಡೆಗೊಂಡರು.
ಈ ಪಟ್ಟಿಯಲ್ಲಿ ಮುನ್ನಡೆಯಲ್ಲಿರುವ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಒಟ್ಟು 6,389 ರನ್ ಗಳಿಸಿದ್ದಾರೆ.
David Warner departs for 61 in 45 balls. A fifty in just his second game after returning to Delhi, his 51st IPL half century. One of the greatest of the league. pic.twitter.com/vqrOpHQrRW
ಐಪಿಎಲ್‌ನಲ್ಲಿ ದಾಖಲೆಯ 51ನೇ ಅರ್ಧಶತಕ... ಈ ನಡುವೆ ವಾರ್ನರ್, ಐಪಿಎಲ್‌ನಲ್ಲಿ ದಾಖಲೆಯ 51ನೇ ಅರ್ಧಶತಕ ದಾಖಲಿಸಿದ್ದಾರೆ. 45 ಎಸೆತಗಳನ್ನು ಎದುರಿಸಿದ ವಾರ್ನರ್ ಆರು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 61 ರನ್ ಗಳಿಸಿದರು.
ಐಪಿಎಲ್‌ನಲ್ಲಿ 50ಕ್ಕೂ ಹೆಚ್ಚು ಅರ್ಧಶತಕಗಳನ್ನು ಬಾರಿಸಿರುವ ಏಕಮಾತ್ರ ಬ್ಯಾಟರ್ ವಾರ್ನರ್ ಆಗಿದ್ದಾರೆ. ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಶಿಖರ್ ಧವನ್ 44 ಅರ್ಧಶಕಗಳನ್ನು ಗಳಿಸಿದ್ದಾರೆ.