ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಡೇವಿಡ್ ವಾರ್ನರ್ 400 ಸಿಕ್ಸರ್‌ಗಳ ಸಾಧನೆ

ಅಕ್ಷರ ಗಾತ್ರ

ಮುಂಬೈ: ಟ್ವೆಂಟಿ-20 ಕ್ರಿಕೆಟ್ ಮಾದರಿಯಲ್ಲಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ 400 ಸಿಕ್ಸರ್‌ಗಳ ಸಾಧನೆ ಮಾಡಿದ್ದಾರೆ.

ಐಪಿಎಲ್ 2022 ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆಡುತ್ತಿರುವ ವಾರ್ನರ್, ಗುರುವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಸ್ಮರಣೀಯ ಸಾಧನೆ ಮಾಡಿದರು.

ಅಜೇಯ 92 ರನ್ ಗಳಿಸಿದ್ದ ವಾರ್ನರ್ ಇನ್ನಿಂಗ್ಸ್‌ನಲ್ಲಿ ಮೂರು ಸಿಕ್ಸರ್‌ಗಳು ಸೇರಿದ್ದವು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ 400 ಸಿಕ್ಸರ್ ಗಳಿಸಿದ ಬ್ಯಾಟರ್‌ಗಳ ಎಲೈಟ್ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಈ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ ಮುನ್ನಡೆಯಲ್ಲಿದ್ದು, ಚುಟುಕು ಕ್ರಿಕೆಟ್‌ನಲ್ಲಿ ಒಟ್ಟು 1,056 ಸಿಕ್ಸರ್‌ ಸಿಡಿಸಿದ್ದಾರೆ. ಈ ಮೂಲಕ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಸಾವಿರಕ್ಕೂ ಹೆಚ್ಚು ಸಿಕ್ಸರ್ ಗಳಿಸಿದ ವಿಶ್ವದ ಏಕಮಾತ್ರ ಬ್ಯಾಟರ್ ಎನಿಸಿದ್ದಾರೆ.

ಡೇವಿಡ್ ವಾರ್ನರ್ ಟಿ20 ಮಾದರಿಯಲ್ಲಿ 400 ಸಿಕ್ಸರ್ ಗಳಿಸಿದ ಆಸ್ಟ್ರೇಲಿಯಾದ ಮೂರನೇ ಬ್ಯಾಟರ್ ಎನಿಸಿದ್ದಾರೆ.

ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಗರಿಷ್ಠ ಸಿಕ್ಸರ್ ಸಾಧಕರು:
ಕ್ರಿಸ್ ಗೇಲ್: 1,056
ಕೀರನ್ ಪೊಲಾರ್ಡ್: 772
ಆ್ಯಂಡ್ರೆ ರಸೆಲ್: 544
ಬ್ರೆಂಡನ್ ಮೆಕಲಮ್: 485
ಶೇನ್ ವ್ಯಾಟ್ಸನ್: 467
ಎಬಿ ಡಿವಿಲಿಯರ್ಸ್: 436
ರೋಹಿತ್ ಶರ್ಮಾ: 429
ಆ್ಯರನ್ ಫಿಂಚ್: 426
ಕಾಲಿನ್ ಮುನ್ರೊ: 420
ಡೇವಿಡ್ ವಾರ್ನರ್: 401

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT